ಸುರತ್ಕಲ್: ಶಿವಳ್ಳಿ ಸಭಾ ಮಂಗಳೂರು ಸಂಘದ ವತಿಯಿಂದ ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನ. 23ರಂದು ಸಾಮೂಹಿಕ ಚಂಡಿಕಾ ಯಾಗವು ಶ್ರದ್ಧಾಭಕ್ತಿ ಹಾಗೂ ವೈಭವದಿಂದ ಸಂಪನ್ನಗೊಂಡಿತು.
ಧಾರ್ಮಿಕ ವಿಧಿವಿಧಾನಗಳು: ಸುದರ್ಶನ ಬನ್ನಿಂತಾಯ ಅವರು ದೇವಿಯ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಚೆನ್ನೈನ ತಲಪಾಡಿ ವಿಷ್ಣುಮೂರ್ತಿ ಭಟ್ ಅವರ ಪೌರೋಹಿತ್ಯದಲ್ಲಿ ದೇವಸ್ಥಾನದ ಹೊರಾವರಣದಲ್ಲಿರುವ ಯಾಗ ಶಾಲೆಯಲ್ಲಿ ಚಂಡಿಕಾ ಯಾಗ, ಸಂಘದ ವಿವಿಧ ವಲಯಗಳ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು.
ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ, ಮಧ್ಯಾಹ್ನ ಸುಮಾರು 12 ಗಂಟೆಗೆ ಮಹಾಪೂಜೆ ಹಾಗೂ ಯಾಗದ ಪೂರ್ಣಾಹುತಿ, ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ಶಿವಳ್ಳಿ ಸಭಾ ಪದಾಧಿಕಾರಿಗಳ ಜೊತೆಯಲ್ಲಿ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಸ್ಥಾಪಕರು ಹಾಗೂ ವಿಹಿಂಪ ಮುಖಂಡರಾದ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರು ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ ಕೊರಿಯರ್, ದೇರೆಬೈಲ್ ರಮೇಶ್ ತಂತ್ರಿ, ವಕೀಲರಾದ ಚಿದಾನಂದ ಕೆದಿಲಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ






