ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78ನೇ ಜನ್ಮದಿನ ಆಚರಣೆ

Upayuktha
0



ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಜನ್ಮದಿನದ ಶುಭ ಹಾರೈಕೆಗಳೊಂದಿಗೆ ಆಶೀರ್ವದಿಸಿದರು.


ಉಜಿರೆ: ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78ನೇ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.


ದೇವಳ ನೌಕರರು, ಊರಿನ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳವರು ಪೂಜ್ಯ ಹೆಗ್ಗಡೆಯವರಿಗೆ ಫಲಪುಷ್ಪ ಹಾರ ಅರ್ಪಿಸಿ ಶ್ರದ್ಧಾಭಕ್ತಿಯಿಂದ ಶುಭ ಹಾರೈಕೆಗಳನ್ನು ಅರ್ಪಿಸಿದರು.


ಮೂಡಬಿದ್ರೆಯ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ವಿಶೇಷ ಪೂಜೆಯ ಪ್ರಸಾದ ನೀಡಿ ಆಶೀರ್ವದಿಸಿದರು.


ಮಾಣಿಲದ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಜೀವಂಧರ ಜೈನ್ ಮತ್ತು ಪುತ್ರರು, ಎಸ್.ಡಿ. ಸಂಪತ್ ಸಾಮ್ರಾಜ್ಯ  ಶಿರ್ತಾಡಿ ಮೊದಲಾದವರು ಹೆಗ್ಗಡೆಯವರಿಗೆ ಜನ್ಮದಿನದ ಶುಭ ಹಾರೈಕೆಗಳನ್ನು ಅರ್ಪಿಸಿದರು.


ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಮಠದಲ್ಲಿಯೆ ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭ ಹಾರೈಸಿದರು. 



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top