ಧರ್ಮಸ್ಥಳ ಲಕ್ಷದೀಪೋತ್ಸವ: ಭಕ್ತರಿಂದ ವೈವಿಧ್ಯಮಯ ಸೇವೆ

Upayuktha
0


ಉಜಿರೆ: ಬೆಂಗಳೂರಿನ ರಾಮು ಮತ್ತು ರಮೇಶ ಅವರ ತಂಡದ ಹೂವಿನ ವ್ಯಾಪಾರಿಗಳು ವಿವಿಧ ಜಾತಿಯ ಹೂವುಗಳನ್ನು ತಂದು ದೇವಸ್ಥಾನವನ್ನು ಆಕರ್ಷಕವಾಗಿ ಅಲಂಕರಿಸಿದ್ದಾರೆ.


ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಭಕ್ತಾದಿಗಳು ಸುಮಾರು 25 ತಂಡದವರು ಸೇರಿ ಬುಧವಾರ ರಾತ್ರಿ ಎಲ್ಲಾ ಭಕ್ತಾದಿಗಳಿಗೆ ಉಚಿತ ಊಟದ ವ್ಯವಸ್ಥೆ ಮಾಡಿದರು.


ಮುದ್ದೆ-ಕಾಳುಸಾರು, ಪಲಾವ್, ಬಿಸಿಬೇಳೆಬಾತ್, ರೈಸ್‌ಬಾತ್, ಹೋಳಿಗೆ, ಮೈಸೂರುಪಾಕ್ ಹಾಗೂ  ಮೊದಲಾದವುಗಳೊಂದಿಗೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳಿಗೆ ಶುಚಿ-ರುಚಿಯಾದ ಊಟದ ವ್ಯವಸ್ಥೆ ಮಾಡಿದರು.


ಕಂಚಿಮಾರುಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭ ಶನಿವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ನಡೆಯಿತು.

ಸಾವಿರಾರು ಭಕ್ತರು ಶ್ರದ್ಧಾ-ಭಕ್ತಿಯಿಂದ ಉತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದವರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top