ನ.7: ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ“ಕನಸುಗಳು-2025”

Chandrashekhara Kulamarva
0


ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಸ್ಪರ್ಧೆಗಳು

15 ವಿವಿಧ ರೀತಿಯ ಸ್ಪರ್ಧೆಗಳು 


ಪುತ್ತೂರು: ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು – 2025” ನವಂಬರ್ 7ನೇ ಶುಕ್ರವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9 ರಿಂದ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ನಿರ್ದೇಶಕರಾದ  ಡಾ.ಕೃಷ್ಣಪ್ರಸನ್ನ ಕೆ. ಇವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಗಳಾದ ರೂಪಲೇಖಾ ನಡೆಸಿಕೊಡಲಿದ್ದಾರೆ. 




ಸಭಾ ಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಲವು ರೀತಿಯ ಸ್ಪರ್ಧೆಗಳು ನಡೆಯಲಿದ್ದು,  ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ಯುವ ವಾಣಿಜ್ಯೋದ್ಯಮಿ, ಮುಖವರ್ಣಿಕೆ, ವೀಡಿಯೋ ಸಂಕಲನ, ಚರ್ಚಾಸ್ಪರ್ಧೆ, ಯಕ್ಷಗಾನ ಭಾಗವತಿಕೆ, ಕಲರವ ಸಾಂಸ್ಕøತಿಕ ವೈವಿಧ್ಯ, ನಿಧಿಶೋಧ, ಭಗವದ್ಗೀತಾ ಕಂಠಪಾಠ ಮುಂತಾದ ಸ್ಪರ್ಧೆಗಳು ನಡೆಯಲಿವೆ. ಅಪರಾಹ್ನ 2.00 ಕ್ಕೆ ಕನಸುಗಳು ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರಪಿ ಇವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಿಗ್‍ಬಾಸ್ ಖ್ಯಾತಿಯ ವಾಯ್ಸ್ ಓವರ್ ಕಲಾವಿದ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರದೀಪ್ ಬಡೆಕ್ಕಿಲ ಇವರು ಭಾಗವಹಿಸಲಿದ್ದಾರೆ.  



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top