ಎಫ್‍ಕೆಸಿಸಿಐ 98ನೇ ವಾರ್ಷಿಕ ಸಭೆಯಲ್ಲಿ, ಜಿಲ್ಲೆಯ ಮೂಲಭೂತ ಸೌಲಭ್ಯಗಳಿಗಾಗಿ ಮನವಿ

Upayuktha
0


ಬಳ್ಳಾರಿ: ನವದೆಹಲಿಯಲ್ಲಿ ಫೇಡರೇಷನ್ ಆಫ್ ಇಂಡಿಯನ್ ಚೇಂಬರ್ಸ್‍ನ 98ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡಿದ್ದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಜಿಲ್ಲೆಯ ಮೂಲಭೂತ ಸೌಲಭ್ಯಗಳ ಈಡೇರಿಕೆಗೆ ಕೋರಿ ಮನವಿ ಸಲ್ಲಿಸಿದ್ದಾರೆ.


ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಮತ್ತು ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರ ನೇತೃತ್ವದಲ್ಲಿ ಎರೆಡು ದಿನಗಳ ಕಾಲ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರತಿನಿಧಿಗಳು, ಬಳ್ಳಾರಿ ನಗರದ ಮೂಲಭೂತ ಸೌಲಭ್ಯಗಳಾದ ತುಂಗಭದ್ರ ಜಲಾಶಯದ ಕ್ರಸ್ಟ್‍ಗೇಟ್‍ಗಳ ಅಳವಡಿಕೆ, ವಿಮಾನ ನಿಲ್ದಾಣ, ರೈಲ್ವೆ ಅಭಿವೃದ್ಧಿ, ರೈಲ್ವೆಯ ಹೊಸ ಮಾರ್ಗಗಳ ಪ್ರಾರಂಭ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಹೊಸ ಕೈಗಾರಿಕೆಗಳ ಪ್ರಾರಂಭ, ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ - ಬಂಡವಾಳ ಹೂಡಿಕೆದಾರರ ಸ್ನೇಹಿ ನೀತಿಗಳು ಮತ್ತು ಕಾನೂನುಗಳ ಜಾರಿ ಹಾಗು ತೆರಿಗೆ ಸರಳೀಕರಣ ಸೇರಿ ವಿವಿಧ ಮೂಲಭೂತ ಸೌಲಭ್ಯಗಳ ಈಡೇರಿಕೆಗೆ ಮನವಿ ಸಲ್ಲಿಸಿದ್ದಾರೆ. 


ಅಲ್ಲದೇ, ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖಾವಾರ ಸಚಿವರು ಮತ್ತು  ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಫೇಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.


ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್‍ನ ಅಧ್ಯಕ್ಷರಾದ ಹರ್ಷವರ್ಧನ್ ಅಗರ್‍ವಾಲ್, ಪ್ರಸ್ತಾವಿತ ಅಧ್ಯಕ್ಷರಾದ ಅನಂತ ಗೋಯಂಕ್, ಎಫ್‍ಕೆಸಿಸಿಐ ಬೆಂಗಳೂರಿನ ಅಧ್ಯಕ್ಷರಾದ ಉಮಾರೆಡ್ಡಿ, ಕರ್ನಾಟಕ ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಜಿ.ಕೆ. ಆದಪ್ಪಗೌಡರ್ ಹಾಗೂ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ, ವಿ.ರಾಮಚಂದ್ರ, ಖಜಾಂಚಿಗಳಾದ ನಾಗಳ್ಳಿ ರಮೇಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸಿಎ ಕೆ. ರಾಜಶೇಖರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top