ಆಹಾರವೇ ಔಷಧವಾಗಬೇಕು: ಡಾ. ಭಾಷಿಣಿ

Chandrashekhara Kulamarva
0


ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ, ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು. 


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. 


ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ದೀಕ್ಷಾ ಸ್ವಾಗತಿಸಿ, ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ, ಅನುಜ್ಞಾ ರಾವ್ ವಂದಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top