ಗೋವಿಂದದಾಸ ಕಾಲೇಜಿನಲ್ಲಿ ಹರಿವಂಶ್ ರಾಯ್ ಬಚ್ಚನ್ ಅವರ ಜನ್ಮ ದಿನಾಚರಣೆ

Upayuktha
0


ಸುರತ್ಕಲ್‌: ಗೋವಿಂದದಾಸ ಕಾಲೇಜು, ಭಾಷಾ ವಿಭಾಗ, ರಾಜ್ಯಶಾಸ್ತ್ರ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ, ಬ್ಯಾಂಕ್ ಆಫ್ ಬರೋಡಾ ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರಾಧಿಕಾರ ಜಂಟಿಯಾಗಿ ಹಮ್ಮಿಕೊಂಡ ಹಿಂದಿಯ ಪ್ರಸಿದ್ಧ ಕವಿ ಮತ್ತು ಬರಹಗಾರಾದ ಹರಿವಂಶ್ ರಾಯ್ ಬಚ್ಚನ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಕಾಲೇಜಿನ ದೃಶ್ಯ ಶ್ರವ್ಯ ಮಂದಿರದಲ್ಲಿ ಆಚರಿಸಲಾಯಿತು. 


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ ಬ್ಯಾಂಕ್ ಆಫ್ ಬರೋಡಾದ ಉಪ ಪ್ರಬಂಧಕರಾದ ರಾಜೀವ್ ರಂಜನ್ ಪ್ರಭಾತ್ ಅವರು ಆರ್ಥಿಕ ಭದ್ರತೆ ಜನರ ಭವಿಷ್ಯದ ಬುನಾದಿ. ಬ್ಯಾಂಕ್ ಆಫ್ ಬರೋಡಾ ಕೇವಲ ಆಯವ್ಯಯ ಲೆಕ್ಕಾಚಾರದಲ್ಲಿ ಉಳಿಯದೆ ಸಾಹಿತ್ಯಿಕ ಹಾಗೂ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾ ಜನೋಪಯೋಗಿಯಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಅಧ್ಯಕ್ಷೀಯ ಭಾಷಣದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಹರೀಶ ಆಚಾರ್ಯ ಪಿ. ಅವರು ಹರಿವಂಶ್ ರಾಯ್ ಬಚ್ಚನ್ ಅವರ ಪ್ರಮುಖ ಕೃತಿಯ ಕುರಿತು ಮಾತನಾಡಿದರು. 


ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಆಶಾಲತಾ ಪಿ. ಭಾರತ ದೇಶವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸುವ ಪ್ರಮಾಣ ವಚನ ಭೋದಿಸಿದರು. ಈ ಹಿನ್ನೆಲೆಯಲ್ಲಿ ಹಿಂದಿ, ಕನ್ನಡ ಮತ್ತು ಸಂಸ್ಕೃತ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಿಗೆ ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಿಸಿದ ಬಹುಮಾನಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಹಿಂದಿ ವಿಭಾಗದ ಮುಖ್ಯಸ್ಥೆ ಜ್ಯೋತಿ ಎಸ್ ಕಾಮತ್ ಸ್ವಾಗತಿಸಿ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ನಟರಾಜ್ ಜೋಶಿ  ವಂದಿಸಿದರು. ದೇವಿಕಾ ಮತ್ತು ಭೂಮಿಕಾ ಪ್ರಾರ್ಥಿಸಿದರು, ಕರ್ಕೇರ ತೇಜಸ್ವಿ ನಿರೂಪಿಸಿದರು .


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top