ಬಾಗಲಕೋಟೆ: ಜಿಲ್ಲಾ ಬಾಲ ಭವನ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲ ಭವನ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನೆಡೆದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ನಡೆದ ಸೃಜನಾತ್ಮಕ ಕಲೆ, ಚಿತ್ರಕಲೆ, ಜೇಡಿ ಮಣ್ಣಿನ ಕಲೆ, ಕರಕುಶಲ ಕಲೆ, ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಮಹೇಶ್ ಎಚ್ ಕರಡಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾನೆ. ಮುಂದೆ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಕಾರ್ಯಕ್ರಮಕ್ಕೆ ಅರ್ಹತೆ ಪಡೆದಿದ್ದಾನೆ.
ಆಯ್ಕೆಗೊಂಡ ವಿದ್ಯಾರ್ಥಿ ಹಾಗೂ ಮಾರ್ಗದರ್ಶನ ನೀಡಿದ ಚಿತ್ರಕಲಾ ಶಿಕ್ಷಕ ಎಸ್ ಎಸ್ ಗೌಡರ ಗುರುಗಳನ್ನು ಶಾಲೆಯ ಗುರು ಬಳಗ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪತ್ರಕರ್ತ ವೀರೇಶ್ ಶಿಂಪಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




