ಬಾರಿಸು ಕನ್ನಡ ಡಿಂಡಿಮ: ಚೇತನ ವಾಣಿಜ್ಯ ಬಿಬಿಎ ಮತ್ತು ಬಿಸಿಎ ಮಹಾವಿದ್ಯಾಲಯದಲ್ಲಿ ಕನ್ನಡ ಹಬ್ಬ

Chandrashekhara Kulamarva
0


ಹುಬ್ಬಳ್ಳಿ: ಡಿ.ಕೆ.ಇ.ಎಸ್ ಶಿಕ್ಷಣ ಸಂಸ್ಥೆಯ ಚೇತನ ವಾಣಿಜ್ಯ ಬಿಬಿಎ ಮತ್ತು ಬಿಸಿಎ ಮಹಾವಿದ್ಯಾಲಯದಲ್ಲಿ ನವೆಂಬರ್ 1ರಂದು “ಬಾರಿಸು ಕನ್ನಡ ಡಿಂಡಿಮ” ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭ ವಿದ್ಯಾರ್ಥಿಗಳು ಹರ್ಷೋಲ್ಲಾಸದಿಂದ ಪಾಲ್ಗೊಂಡರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಚೇತನ ಬಿಸಿನೆಸ್ ಸ್ಕೂಲ್‌ನ ನಿರ್ದೇಶಕ ಡಾ. ವಿಶ್ವನಾಥ. ಎಂ. ಕೊರವಿ, ಅವರು ಮಾತನಾಡಿ, “ಕನ್ನಡ ಭಾಷೆ ಕೇವಲ ಸಂವಹನದ ಸಾಧನವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಅಸ್ತಿತ್ವದ ಪ್ರತಿಬಿಂಬವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಕನ್ನಡವನ್ನು ಪ್ರೀತಿ ಮಾಡಬೇಕು ಮತ್ತು ಅದರ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು” ಎಂದು ಹೇಳಿದರು.


ಮುಖ್ಯ ಅತಿಥಿಯಾಗಿ ಹಾಜರಿದ್ದ ಪ್ರೊ. ಬಿರೇಶ್ ತಿರಕಪ್ಪನವರ ಅವರು ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ, “ಭಾಷೆ ಒಂದು ಜನಾಂಗದ ಜೀವಾಳ. ಕನ್ನಡವು ವೈಭವಶಾಲಿ ಸಾಹಿತ್ಯ ಪರಂಪರೆ ಮತ್ತು ಶ್ರೀಮಂತ ಸಂಸ್ಕೃತಿಯ ಸಂಕೇತವಾಗಿದೆ. ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡುವುದನ್ನು, ಬರೆಯುವುದನ್ನು ಹೆಮ್ಮೆ ಎಂದು ಭಾವಿಸಬೇಕು” ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ರಾಜ್ಯೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.


ಪ್ರೊ. ಮೖಲಾರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಡಾ. ಅಶೋಕ ಆರ್. ವಡಕಣ್ಣವರರು ಸ್ವಾಗತಿಸಿದರು. ಪ್ರೊ. ಭಾಗ್ಯಶ್ರೀ ಬಳಿಗಾರ ಮತ್ತು ಡಾ. ಅನ್ನಪೂರ್ಣಾ ಟಿ., ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top