ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷನಾಗಿ ಎರಡು ಅವಧಿಗೆ (ಆಗಸ್ಟ್ 4,2018 ರಿಂದ 07.11.2025 ರ ವರೆಗೆ) ಅವಕಾಶ ನೀಡಿರುವುದಕ್ಕೆ ನನ್ನ ಪತ್ರಕರ್ತ ಮಿತ್ರರಿಗೆ ಧನ್ಯವಾದಗಳು ಎಂದು ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.
ನಮ್ಮ ಅವಧಿಯಲ್ಲಿ ಪತ್ರಕರ್ತರ ಅರೋಗ್ಯ ಕ್ಷೇಮಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಪತ್ರಿಕಾ ಭವನದಲ್ಲಿ ಮೀಡಿಯಾ ಹೆಲ್ತ್ ಕ್ಲಬ್ ನ್ನು ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಸಹಭಾಗಿತ್ವದಲ್ಲಿ ಆರಂಭಿಸಲಾಗಿದೆ. ಈ ಮೂಲಕ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ಅರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಕ್ಷೇಮಾ ಹೆಲ್ತ್ ಕಾರ್ಡ್ ಹಾಗೂ ಮಣಿಪಾಲ ಅರೋಗ್ಯ ಕಾರ್ಡನ್ನು ಪತ್ರಕರ್ತ ಮಿತ್ರರಿಗೆ ವಿತರಿಸಲಾಗಿದೆ.
ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಆರಂಭಿಸಲಾಗಿದೆ. ಕಳೆದ ಎರಡು ವರ್ಷದಲ್ಲಿ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ. ಸಮಾಜಕ್ಕೆ ಮಾದರಿ ಯಾಗುವ ಕೆಲಸ ಮಾಡಿದ್ದೇನೆ ಎಂಬ ಹೆಮ್ಮೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು.
ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಆರಂಭಿಸಲಾಗಿದೆ. ಈ ಮೂಲಕ ಪತ್ರಕರ್ತರಿಗೆ ಕಡಿಮೆ ದರದಲ್ಲಿ ನಿವೇಶನ ನೀಡುವ ಪ್ರಯತ್ನ ಮುಂದುವರಿದಿದೆ. ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಮಂಕಿ ಪದವು ಎಂಬಲ್ಲಿ 3 ಎಕರೆ ಕಂದಾಯ ಭೂಮಿಯನ್ನು ನಿವೇಶನ ನೀಡುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕೊರೋನ ವೇಳೆ 4 ಕುಟುಂಬಗಳಿಗೆ ರಾಜ್ಯ ಸರಕಾರದಿಂದ 14 ಲಕ್ಷ ರೂಪಾಯಿ ನೆರವು ಕೊಡಿಸಲಾಗಿದೆ. ಕೊರೋನ ವೇಳೆ ಕಾರ್ಮಿಕ ಇಲಾಖೆ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಸಹಾಯದಲ್ಲಿ ಎಲ್ಲಾ ಪತ್ರಕರ್ತರಿಗೆ ಫುಡ್ ಕಿಟ್ ವಿತರಿಸಲಾಗಿದೆ.
5 ಪತ್ರಕರ್ತರ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಸಾಧಕ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನಿಸಿ ಅವರನ್ನು ಗುರುತಿಸುವ ಕೆಲಸ ಮಾಡಲಾಗಿದೆ. ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಹಾಗೂ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಸಾಮಾಜಿಕ ಚಟುವಟಿಕೆಗಳು:
ಪತ್ರಕರ್ತರ ಗ್ರಾಮ ವಾಸ್ತವ್ಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಮಾಡಲು ಸಾಧ್ಯವಾಗಿದೆ. ಬೆಳ್ತಂಗಡಿ ತಾಲೂಕಿನ ಕುತ್ಲುರು, ಸುಳ್ಯ ತಾಲೂಕಿನ ಮಡಪ್ಪಾಡಿ, ಕೊಲ್ಲಮೊಗರು, ಕಡಬ ತಾಲೂಕಿನ ಸಿರಿಬಾಗಿಲು, ಪುತ್ತೂರು ತಾಲೂಕಿನ ಸುಳ್ಯಪದವಿನಲ್ಲಿ ಯಶಸ್ವಿ ಗ್ರಾಮ ವಾಸ್ತವ್ಯ ಮಾಡಲಾಗಿದೆ.
ಕುತ್ಲುರು ಸರಕಾರಿ ಶಾಲೆಗೆ ವಿವಿಧ ಕಂಪನಿ ಹಾಗೂ ಸರಕಾರದ ಮೂಲಕ 50 ಲಕ್ಷಕ್ಕೂ ಮಿಕ್ಕಿ ಅನುದಾನ ತರಲಾಗಿದೆ. ಮಡಪಾಡಿಯಲ್ಲಿ 1.5 ಕೋಟಿ ವೆಚ್ಚದಲ್ಲಿ 3 ಕಿಲೋಮೀಟರ್ ರಸ್ತೆ ನಿರ್ಮಾಣವಾಗಿದೆ. ಬಿಜೈ ಕಾಪಿಕಾಡ್ ಅಂಗನವಾಡಿಯನ್ನು ದಾನಿಗಳ ಮೂಲಕ ಅಭಿವೃದ್ಧಿಪಡಿಸಲಾಗಿದೆ.
ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಮೂಲಕ ಮಂಗಳೂರು ವಿಶ್ವದಲ್ಲಿಯೇ ಗುರುತಿಸುವ ಕೆಲಸವಾಗುತ್ತಿದೆ. ಪತ್ರಕರ್ತರ ಸಂಘ ಆರಂಭಿಸಿದ ಈ ಕಾರ್ಯಕ್ರಮವನ್ನು ಈಗ ಕೆನರಾ ಚೇಂಬರ್ ಒಫ್ ಕಾಮರ್ಸ್ ಹಾಗೂ ಕ್ರಡೈ ಮುಂದುವರಿಸಿಕೊಂಡು ಹೋಗುತ್ತಿದೆ.
ಮುಂದಿನ ಯೋಜನೆಗಳು
ಬ್ರ್ಯಾಂಡ್ ಮಂಗಳೂರು ಇಂಟರ್ನ್ಯಾಷನಲ್ ಕೌನ್ಸಿಲ್ ಸ್ಥಾಪನೆ
ಮಂಗಳೂರನ್ನು ವಿಶ್ವದಲ್ಲಿ ಆಕರ್ಷಸಲು ಈ ಕೌನ್ಸಿಲ್ ಮೂಲಕ ಪ್ರಯತ್ನಿಸಲಾಗುವುದು. ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು, ಉದ್ಯಮಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು.
ಗ್ರಾಮ ವಾಸ್ತವ್ಯ ಫಾಲೋ ಅಪ್ ಸಮಿತಿ
ಗ್ರಾಮ ವಾಸ್ತವ್ಯ ಮಾಡಿರುವ ಗ್ರಾಮಗಳಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


