ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನವೆಂಬರ್ 13 ರಂದು ಬೆಳಗ್ಗೆ 10ಗಂಟೆಗೆ ಕಾಲೇಜು ಆವರಣದ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಜಾನಪದ ಶಾಸ್ತ್ರ ಮತ್ತು ಬುಡಕಟ್ಟು ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರೋಹಿಣಾಕ್ಷ ಶಿರ್ಲಾಲು ಅವರು ಭಾಗವಹಿಸಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




