ಸರಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಕೈಗಾರಿಕೆಗಳ ನೆರವು ಅಗತ್ಯ

Upayuktha
0


ಸುರತ್ಕಲ್‌: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಮೂಲಭೂತ ಸೌಲಭ್ಯಗಳ ಅಭಿವೃದ್ದಿಗೆ ಸ್ಥಳೀಯ ಕೈಗಾರಿಕಾ ಸಂಸ್ಥೆಗಳು ಆದ್ಯತೆ ನೀಡಬೇಕಾಗಿದೆ ಎಂದು ಪಣಂಬೂರು ಮೊಗವೀರ ಮಹಾಸಭೆಯ ಅಧ್ಯಕ್ಷ ಮಾಧವ ಸುವರ್ಣ ನುಡಿದರು.


ಅವರು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯಲ್ಲಿ ನವ ಮಂಗಳೂರು ಬಂದರು ಪ್ರಾಧಿಕಾರ ಸಿಎಸ್‌ಆರ್ ಯೋಜನೆಯಲ್ಲಿ ಕೊಡಮಾಡುತ್ತಿರುವ ಶಾಲಾ ಕೊಠಡಿ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.


ಲಯನ್ಸ್ ಕ್ಲಬ್ ನವ ಮಂಗಳೂರಿನ ನಿರ್ದೇಶಕ ಮನೋಜ್ ಕುಮಾರ್ ತಣ್ಣೀರುಬಾವಿ ಮಾತನಾಡಿ ಸರಕಾರಿ ಶಾಲೆಗಳಿಗೆ ಸೇವಾ ಸಂಸ್ಥೆಗಳು ವಿವಿಧ ಅನುದಾನಗಳ ಮೂಲಕ ನೆರವು ನೀಡಿ ಶಾಲಾ ಅಭಿವೃದ್ಧಿಗೆ ಸಹಾಯ ಮಾಡಬೇಕಾಗಿದೆ ಎಂದರು.


ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ ಮಾತನಾಡಿ, ವಿವಿಧ ಕೈಗಾರಿಕಾ ಸಂಸ್ಥೆ ಹಾಗೂ ಸಮಾಜ ಸೇವಾ ಸಂಸ್ಥೆಗಳ ಸಹಕಾರದಿಂದ ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮದ ದ್ವಿಭಾಷಾ ಮಾಧ್ಯಮ ಶಾಲೆಯಾಗಿ  ಉತ್ತಮ ಕಲಿಕಾ ವಾತಾವರಣ ಹೊಂದಿದೆ. ನವಮಂಗಳೂರು ಬಂದರು ಪ್ರಾಧಿಕಾರದ ಕೊಡುಗೆಯು ಶಾಲಾ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.


ಕುಳೂರು ಮೊಗವೀರ ಮಹಾ ಸಭಾದ ಉಪಾಧ್ಯಕ್ಷ ತೇಜಪಾಲ್ ಪುತ್ರನ್, ಸದಸ್ಯ ಶ್ರೀನಿವಾಸ ಪುತ್ರನ್, ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ್ ರಾವ್, ಶ್ರೀನಿವಾಸ ರಾವ್, ನವ ಮಂಗಳೂರು ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಮುರಳೀಧರನ್, ಕೋಶಾಧಿಕಾರಿ ಸಂತೋಷ್, ಜಿಲ್ಲಾ ಲಯನ್ಸ್ ಅಧಿಕಾರಿಗಳಾದ  ಕರುಣಾಕರ ಶೆಟ್ಟಿ, ಅಬೂಬಕರ್ ಕುಕ್ಕಾಡಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಂಜುಳಾ, ಶಿಕ್ಷಕಿಯರಾದ ಸುಕೇಶಿನಿ, ಸಿಂತಿಯ, ನೀತಾ ತಂತ್ರಿ, ರೂಪ, ಗುತ್ತಿಗೆದಾರ ಪುನೀತ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸ್ವಾಗತಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top