ಅಂತರ್ ಕಾಲೇಜು ಸ್ಪರ್ಧಾಕೂಟ -2025: ವಾಣಿಜ್ಯೋದ್ಯಮ ದಿನ ಮತ್ತು ಉದ್ಘಾಟನಾ ಸಮಾರಂಭ

Upayuktha
0


ಬೆಂಗಳೂರು: ಶುಕ್ರವಾರದಂದು ಶ್ರೀ ಕೃಷ್ಣ ಪದವಿ ಕಾಲೇಜಿನಲ್ಲಿ ಅಂತರ್ ಕಾಲೇಜು ಸ್ಪರ್ಧಾಕೂಟ ವಾಣಿಜ್ಯೋದ್ಯಮ ದಿನ ಮತ್ತು ಉದ್ಘಾಟನಾ ಸಮಾರಂಭ (ಪಿಯು ವಿದ್ಯಾರ್ಥಿಗಳಿಗೆ) ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಎಸ್.ಎಲ್.ಎನ್. ಕಾರ್ಪ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ನ ಆರ್ಥಿಕ ನಿರ್ದೇಶಕರಾದ ಕುಮಾರಿ. ಸರಾಯು ಸುಧೀಂದ್ರ ರವರು , ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ,ರುಕ್ಮಾಂಗದ ನಾಯ್ಡು ರವರು, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಎಸ್. ಪಿ. ಮನೋಹರ್ ರವರು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಉಷಾ ಕುಮಾರಿ ರವರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ರೆಡ್ಡಿ ರವರು ವಿಜ್ಞಾನ ವಿಭಾಗದ ಪ್ರಾಂಶುಪಾಲರಾದ ಮಂಜುನಾಥ್ ರವರು ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಪ್ರಾಧ್ಯಾಪಕರುಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳಾದ ಕುಮಾರಿ ಸರಾಯು ರವರು ಮಾತನಾಡುತ್ತಾ, ತಾನು ಸ್ವತಃ ಒಬ್ಬ ಉದ್ಯಮಿಯಾಗಿದ್ದು, ಉದ್ಯಮ ಕ್ಷೇತ್ರದಲ್ಲಿ ಉತ್ತಮ ಉದ್ಯಮಿ ಯಾಗುವುದು ಹೇಗೆ ಎಂಬುದನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಮಾರಾಟ, ಚೌಕಾಸಿ ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಬದುಕುಳಿಯುವಂತಹ ಕೆಲವು ವಿಷಯಗಳ ಬಗ್ಗೆ ಮನವರಿಕೆ ಮಾಡಿದರು. ಒಬ್ಬ ವ್ಯಕ್ತಿಯು ಉತ್ತಮ ಉದ್ಯಮಿಯಾಗಲು ಯಾವುದೇ ಉತ್ಪನ್ನ ಸೇವೆ ಅಥವಾ ಸಮಸ್ಯೆಯ ಬಗ್ಗೆ ವಿಭಿನ್ನವಾಗಿ ಯೋಚಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ.ರುಕ್ಮಾಂಗದ ನಾಯ್ಡು ರವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತಮ್ಮ ಕಾಲೇಜಿನಲ್ಲಿ ವಿಶ್ವವಿದ್ಯಾಲಯದಿಂದ ಟಾಪರ್ ಬಂದಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ಸಂಸ್ಥೆಯ ಸಾಧನೆ, ಶಿಸ್ತು ಮತ್ತು ಸಂಯಮಗಳ ಬಗ್ಗೆ ತಿಳಿಸಿಕೊಟ್ಟರು.


ವಿದ್ಯಾರ್ಥಿಗಳು ಎಲ್ಲಾ ಚಟುವಟಿಕೆ ಮತ್ತು ಕ್ರೀಡೆಗಳಲ್ಲಿ ಭಾಗವಹಿ ಸೋಲು- ಗೆಲುವು ಎಂಬ ಭಾವನೆ ಮರೆತು ಎಲ್ಲರೂ ಪ್ರೀತಿ ವಿಶ್ವಾಸದಿಂದ ಆಟಗಳನ್ನು ಆಡಬೇಕೆಂದು ಕರೆ ನೀಡಿದರು ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ, ಶ್ರದ್ಧೆ ಮತ್ತು ಗುರಿ ಕೇಂದ್ರಿತವಾಗಿದ್ದರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಮನವರಿಕೆ ಮಾಡಿದರು. ನಂತರ ಎಲ್ಲರಿಗೂ ಶುಭ ಹಾರೈಸಿದರು. ಸ್ಪರ್ಧೆಗೆ 30 ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top