ನಿವೃತ್ತರಾದ ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಅವರಿಗೆ KRMSS ಅಭಿನಂದನೆ

Upayuktha
0


ಮಂಗಳೂರು: ಹಿರಿಯ ಕೆಎಎಸ್ ಅಧಿಕಾರಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಲಸಚಿವರಾಗಿ ಸೇವೆ ಸಲ್ಲಿಸಿ ವೃತ್ತಿಯಿಂದ ನಿವೃತ್ತರಾದ ರಾಜು ಮೊಗವೀರ ಕೋಣಿ ಅವರಿಗೆ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದಿಂದ ಹೃದಯ ಸ್ಪರ್ಶಿ ಅಭಿನಂದನೆ ನೀಡಲಾಯಿತು.


ಅವರ ನಿವೃತ್ತಿಯ ದಿನದಂದು ಅವರನ್ನು ಭೇಟಿ ಮಾಡಿ ಶ್ರೀಯುತರು ಸಲ್ಲಿಸಿದ ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತವನ್ನು ಸಂಘದ ಪದಾಧಿಕಾರಿಗಳು ಪ್ರಶಂಶಿಸಿದರು. ಸನ್ಮಾನವನ್ನು ನಡೆಸಿದ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ  ಡಾ. ಮಾಧವ ಎಂ ಕೆ ಅವರು, ರಾಜು ಮೊಗವೀರರು ಕೇವಲ ಒಬ್ಬ ಅಧಿಕಾರಿಯಾಗಿರದೆ ಇತಿಹಾಸ, ಸಾಹಿತ್ಯ, ಆಡಳಿತ, ಭಾಷೆ, ಸಂಸ್ಕೃತಿ ಹೀಗೆ ಹಲವು ವಿಷಯಗಳಲ್ಲಿ ತಜ್ಞರಾಗಿದ್ದು ಜೀವನದುದ್ದಕ್ಕೂ ಪ್ರಾಮಾಣಿಕ ಮತ್ತು ದಕ್ಷ ಆಡಳಿತವನ್ನು ನೀಡಿದ್ದಾರೆ ಎಂದು ಶ್ಲಾಘಿಸಿದರು.


ಅಭಿನಂದನಾ ಸಂದರ್ಭದಲ್ಲಿ ಮಂಗಳೂರು ವಿಭಾಗದ ಅಧ್ಯಕ್ಷರಾದ ಪ್ರೊ ವಾಣಿ ಯು ಎಸ್ ಮತ್ತು ಎ ಬಿ ಆರ್ ಎಸ್ ಎಂನ ಮಂಗಳೂರು ವಿಶ್ವವಿದ್ಯಾಲಯ ಘಟಕದ ಅಧ್ಯಕ್ಷರಾದ ಪ್ರೊ ವಿಶಾಲಾಕ್ಷಿಯವರು ನೆನಪಿನ ಸ್ಮರಣಿಕೆ ನೀಡಿದರು. ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ಶ್ರೀಮತಿ ಶ್ರುತಿ ಎನ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರೊ.ನಾಗರತ್ನ ರಾವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top