ಮಂಗಳೂರು: ಶ್ರೀ ಕಟೀಲು ಮೇಳದಲ್ಲಿ ನಿರಂತರ 27 ವರ್ಷಗಳಿಂದ ಕಲಾ ಸೇವೆಗೈಯುತ್ತಿರುವ ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ಹಾಸ್ಯಗಾರ ರವಿಶಂಕರ್ ವಳಕುಂಜ ಅವರಿಗೆ ಕದ್ರಿ ಯಕ್ಷ ಬಳಗವು "ಕದ್ರಿ ವಿಷ್ಣು ಪ್ರಶಸ್ತಿ-2025" ನೀಡಿ ಗೌರವಿಸಲಿದೆ.
ರವಿಶಂಕರ್ ಅವರು, ಹಾಸ್ಯ ರತ್ನ ನಯನ ಕುಮಾರ್, ಉಂಡೆಮನೆ ಶ್ರೀ ಕೃಷ್ಣ ಭಟ್ ಅವರಿಂದ ಯಕ್ಷ ಶಿಕ್ಷಣ ಪಡೆದು ಕಟೀಲು ಮೇಳಕ್ಕೆ ಸೇರಿದ ಮೂರು ವರ್ಷದಲ್ಲೇ ಪ್ರಧಾನ ಹಾಸ್ಯ ಗಾರರಾಗಿ ಮುನ್ನಡೆದರು. ಯಕ್ಷಗಾನ ಪ್ರಸಂಗ ದೃಶ್ಯಾವಳಿ, ವಾಚಿಕ ಸಮಾರಾಧನೆ, ಯಕ್ಷ ಪಾತ್ರ ದೀಪಿಕಾ, ಪ್ರಸಂಗ ವಾಚಿಕ, ಯಕ್ಷಗಾನ ಪ್ರಸಂಗ ಗಳಲ್ಲಿ ನಾರದ, ರಂಗ ನಡೆಗೊಂದು ಕೈಪಿಡಿ ಮೊದಲಾದ ಅನುಭವ ಜನ್ಯ ಅಪೂರ್ವ ಸಾಹಿತ್ಯ ಕೃತಿಗಳನ್ನು ಯಕ್ಷ ರಂಗಕ್ಕೆ ನೀಡಿದ ಯಕ್ಷ ಸಾಹಿತಿ, ಸಂಪಾದಕ, ತಾಳಮದ್ದಳೆ ಅರ್ಥಧಾರಿ, ಸಂಪನ್ಮೂಲ ವ್ಯಕ್ತಿ.
ಕದ್ರಿ ವಿಷ್ಣು ಸಂಸ್ಮರಣೆ
ಇಚ್ಲಂಪಾಡಿ, ಕೂಡ್ಲು, ಕೊರಕೋಡು, ಅಡೂರು, ಕುಂಡಾವು, ಕದ್ರಿ, ಧರ್ಮಸ್ಥಳ, ಕಟೀಲು ಮೇಳಗಳಲ್ಲಿ ತೆಂಕು ತಿಟ್ಟಿನ ರಾಜಕಿರೀಟ ವೇಷದಲ್ಲಿ ಅಪೂರ್ವ ಸಾಧನೆ ಗೈದಿದ್ದ, ಅರ್ಜುನ, ಋತುಪರ್ಣ, ಇಂದ್ರಜಿತು, ಹಿರಣ್ಯಾಕ್ಷ ಮೊದಲಾದ ಪಾತ್ರಗಳಲ್ಲಿ ಮೆರದಿದ್ದ ಮೇರು ಕಲಾವಿದ ಕದ್ರಿ ವಿಷ್ಣು ಸಂಸ್ಮರಣೆಯು ನಡೆಯಲಿದೆ.
ನವೆಂಬರ್ 17 ಮಂಗಳವಾರ ಶ್ರೀ ಕ್ಷೇತ್ರ ಕದ್ರಿಯಲ್ಲಿ ಶ್ರೀ ಕಟೀಲು ಮೇಳದ ಸೇವೆ ಆಟದಂದು "ಕದ್ರಿ ವಿಷ್ಣು ಪ್ರಶಸ್ತಿ-2025 'ಪ್ರದಾನ ಮಾಡಲಾಗುವುದು ಎಂದು ಕದ್ರಿ ಯಕ್ಷ ಬಳಗದ ಕದ್ರಿ ನವನೀತ ಶೆಟ್ಟಿ ಹಾಗೂ ಪ್ರದೀಪ್ ಆಳ್ವ ಕದ್ರಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



