ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Upayuktha
0


ಮಂಗಳೂರು: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಡಾ. ಅರುಣಕುಮಾರ ಎಸ್. ಆರ್., ಸಹ ಸಂಶೋಧಕರು, ಆರ್.ಆರ್.ಸಿ (ಮಾಹೆ), ಎಂ.ಜಿ.ಎಂ ಕಾಲೇಜು ಆವರಣ ಇವರು ಪಾಲ್ಗೊಂಡರು.ಅವರು ಮಾತನಾಡಿ, “ಕನ್ನಡ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಪರಂಪರೆ, ಸಂಸ್ಕೃತಿ ಹಾಗೂ ಅಸ್ತಿತ್ವದ ಪ್ರತೀಕವಾಗಿದೆ. ಯುವ ಪೀಳಿಗೆಯು ಕನ್ನಡದ ಗೌರವವನ್ನು ಕಾಪಾಡಿ ಅದರ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಬೇಕು” ಎಂದು ಹೇಳಿದರು.ಈ ಸಂದರ್ಭದಲ್ಲಿ ಡಾ. ಅರುಣ್ ಕುಮಾರ್ ಎಸ್ .ಆರ್ ಅವರನ್ನು ಸನ್ಮಾನಿಸಲಾಯಿತು.


ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂ.ಜೆ.ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಹಾಗು ಬಿ.ಸಿ.ಎ ಸಂಯೋಜಕರಾದ ಡಾ।ಎಂ.ವಿಶ್ವನಾಥ ಪೈ ಉಪಸ್ಥಿತರಿದ್ದರು.


ಕನ್ನಡ ವಿಭಾಗದ ಉಪನ್ಯಾಸಕಿ ಕು. ದೀಪಿಕಾ ಅವರು ಪ್ರಾಸ್ತಾವಿಕವಾಗಿಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಅನುಪಮಾ ದ್ವಿತೀಯ ಬಿಕಾಂ ನಿರೂಪಿಸಿದರು.ಭೂಮಿಕಾ,ಪ್ರಸಿಜಾ,ತನ್ವಿ ನಾಡಗೀತೆಯನ್ನು ಹಾಡಿದರು.ಅತಿಥಿಗಳ ಪರಿಚಯವನ್ನು ಶ್ರೀರಾಮ್ ದ್ವಿತೀಯಬಿಸಿಎ ಮಾಡಿದರು. ಶ್ರೀಕರ ತೃತೀಯ ಬಿಕಾಂ ಧನ್ಯವಾದಗೈದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top