ಚಿತ್ರಾಪುರ ಫಿಶರೀಸ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Chandrashekhara Kulamarva
0


ಸುರತ್ಕಲ್‌: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಲಯನ್ಸ್ ಕ್ಲಬ್ ನವಮಂಗಳೂರು ಸಹಯೋಗದಲ್ಲಿ ಆಚರಿಸಲಾಯಿತು.


ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ಭಾಷಣ, ಹಾಡು ಮತ್ತು ನೃತ್ಯ ಗಳು ನಡೆಯಿತು.


ಲಯನ್ಸ್ ಕ್ಲಬ್ ಕಾರ್ಯದರ್ಶಿ ಮುರಳೀಧರನ್, ಕೋಶಾಧಿಕಾರಿ ಸಂತೋಷ್, ಲಯನ್ಸ್ ಜಿಲ್ಲಾ ಪದಾಧಿಕಾರಿಗಳಾದ ಮನೋಜ್ ಕುಮಾರ್. ಕರುಣಾಕರ ಶೆಟ್ಟಿ, ಅಬೂಬಕರ್ ಕುಕ್ಕಾಡಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ತೇಜಪಾಲ್, ಶ್ರೀನಿವಾಸ ಪುತ್ರಾನ್, ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ್ ರಾವ್, ಶ್ರೀನಿವಾಸ್ ರಾವ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳಾ ಮುಖ್ಯ ಅತಿಥಿಗಳಾಗಿದ್ದರು.


ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಶಿಕ್ಷಕಿಯರಾದ ಸುಕೇಶಿನಿ, ಸಿಂತಿಯ, ನೀತಾ ತಂತ್ರಿ, ರೂಪಾ, ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top