ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ನೀಡಿದರು. ಅಕ್ಟೋಬರ್ 31, 2025 ರಂದು ನಡೆದ ಕರಾಟೆ ಸ್ಪರ್ಧೆಯಲ್ಲಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂತರ ವಿಶ್ವವಿದ್ಯಾಲಯ ದಕ್ಷಿಣ ವಲಯ ಸ್ಪರ್ಧೆಗೆ 4 ವಿದ್ಯಾರ್ಥಿಗಳು - ತೃತೀಯ ಬಿ.ಸಿಎ ವಿದ್ಯಾರ್ಥಿನಿಯರಾದ ಛಾಯಾ, ಪ್ರಜ್ಞಾ, ಲಿಸಾ ಮತ್ತು ಪ್ರಥಮ ಬಿ.ಬಿ.ಎ ವಿದ್ಯಾರ್ಥಿ ರಿತೇಶ್ ಅವರು ಆಯ್ಕೆಗೊಂಡಿದ್ದಾರೆ.
ವಿಜೇತರಿಗೆ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಅಧಿಕಾರಿಗಳು ಪ್ರಶಸ್ತಿ ಪತ್ರ ಮತ್ತು ಶೀಲ್ಡ್ ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


