ಕರಾಟೆ: ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ, SJFI ಮಟ್ಟದ ಸ್ಪರ್ಧೆಗೆ ಅಂಬಿಕಾ ವಿದ್ಯಾಲಯದ ದೃಶಾನ ಆಯ್ಕೆ

Chandrashekhara Kulamarva
0


ಪುತ್ತೂರು: ಉತ್ತರ ಪ್ರದೇಶ, ಮಥುರಾದ ಗೋವರ್ಧನ ಮಾರ್ಗದಲ್ಲಿರುವ ಶ್ರೀ ಜೀ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ 13ರಿಂದ 16ರವರೆಗೆ ವಿದ್ಯಾಭಾರತಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ.ಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಅವರು ಕಿಶೋರ ವರ್ಗದ ಬಾಲಕಿಯರ 52 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. 


ದೃಶಾನ ಅವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನದ ಸುರೇಶ್ ಗೌಡ ಸರಳೀಕಾನ ಮತ್ತು ವಿದ್ಯಾಶ್ರೀ ದಂಪತಿಗಳ ಪುತ್ರಿ. ದೃಶಾನ ಜನವರಿಯಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ಎಸ್.ಜೆ.ಎಫ್.ಐ. (ಸ್ಕೂಲ್ ಗೇಮ್  ಫೆಡರೇಷನ್ ಆಫ್ ಇಂಡಿಯಾ) ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top