ಬಾಗಲಕೋಟೆ: ಕನ್ನಡ ಭಾಷೆಗೆ ಸುದೀರ್ಘ ಇತಿಹಾಸ ಪರಂಪರೆ ಇದೆ. ಕದಂಬ ಚಾಲುಕ್ಯರಾದಿಯಾಗಿ ಅನೇಕ ಅರಸು ಮನೆತನಗಳ ಕಾಲಘಟ್ಟದಲ್ಲಿ ಶ್ರೀಮಂತಿಕೆಯ ಸಾಹಿತ್ಯ ರಚನೆಗೊಂಡು ನಾಡಿನ ಗತವೈಭವಕ್ಕೆ ಸಾಕ್ಷಿ ಎನಿಸಿದೆ ಎಂದು ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರಿನ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಕನ್ನಡ ಸಂಘದ ಮುಖ್ಯಸ್ಥ ಡಾ. ಸಂಗಮೇಶ ಹಂಚಿನಾಳ ಹೇಳಿದರು.
ಮಹಾವಿದ್ಯಾಲಯದ ಆವರಣದಲ್ಲಿ ಜರುಗಿದ 70ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯೋತ್ಸವದ ಆಚರಣೆ ಮೂಲಕ ಭಾಷೆ ಸಂಸ್ಕೃತಿಗೆ ಗೌರವ ಸೂಚಿಸುವ ಕಾರ್ಯ ಎಲ್ಲರಿಂದಲೂ ನಡೆಯಬೇಕು. ಕನ್ನಡದ ಅಸ್ಮಿತೆಯ ಕುರಿತಾದ ಚಿಂತನೆಗಳು ನಾಡಿನ ಹಿರಿಮೆ ಹೆಚ್ಚಿಸಲು ನೆರವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಲಾಯಿತು. ಪ್ರಾಚಾರ್ಯ ಡಾ. ಜಗದೀಶ ಗು. ಭೈರಮಟ್ಟಿ, ವಿಶ್ರಾಂತ ಪ್ರಾಚಾರ್ಯ ಬಿ.ಬಿ. ಬೇವೂರ, ಹಿರಿಯ ಉಪನ್ಯಾಸಕರಾದ ಎಸ್.ಎಸ್ ಆದಾಪೂರ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಜಿ.ಎಸ್. ಗೌಡರ ಬೋಧಕೇತರ ಸಿಬ್ಬಂದಿಗಳಾದ ಆರ್.ಬಿ. ಕರಡಿಗುಡ್ಡ, ಶಿವು ಕಟಗಿ ಮುಂತಾದವರು ಭಾಗಿಯಾಗಿದ್ದರು.
ವಿದ್ಯಾರ್ಥಿನಿ ವಿಜಯಲಕ್ಷ್ಮೀ ಬಂಡಿವಡ್ಡರ ಸಂಗಡಿಗರು ನಾಡಗೀತೆ ಹಾಡಿದರು. ಐ.ಕ್ಯೂ.ಎ.ಸಿ ಘಟಕದ ಮುಖ್ಯಸ್ಥ ಡಾ. ಎ.ಎಂ. ಗೊರಚಿಕ್ಕನವರ ನಿರೂಪಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ಮುಖ್ಯಸ್ಥ ಡಿ.ವೈ. ಬುಡ್ಡಿಯವರ ವಂದಿಸಿದರು. ಕಾರ್ಯಕ್ರಮದ ನಂತರ ಕನ್ನಡ ವಿಷಯದ ಕುರಿತಾಗಿ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


