ಶಡ್ರಂಪಾಡಿ ದೇವಸ್ಥಾನ: ಕಾರ್ತಿಕ ಮಾಸಾಚರಣೆ, ಸಾಂಸ್ಕೃತಿಕ ಕಾರ್ಯಕ್ರಮ

Chandrashekhara Kulamarva
0


ಕುಂಬಳೆ: ಶಡ್ರಂಪಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ ಒಂದು ತಿಂಗಳಿಂದ ಕಾರ್ತಿಕ ಮಾಸಾಚರಣೆಯು ಹಲವು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅತ್ಯಂತ ವೈಭವವಾಗಿ ನಡೆಯುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಕಾಸರಗೋಡು ಸಂಸ್ಥೆಯ ಸಾಂಸ್ಕೃತಿಕ ಕಲಾ ವೈಭವವು ಹಲವು ವಿಧ ಕಲಾ ಪ್ರಕಾರಗಳ ಪ್ರಸ್ತುತಿಯಿಂದ ಸಂಪನ್ನಗೊಂಡಿತು. ಬಹುಜನರ ಮೆಚ್ಚುಗೆ ಪಡೆದ ಕಾರ್ಯಕ್ರಮದ ಸಂಯೋಜನೆ ಹಾಗೂ ನಿರೂಪಣೆಯನ್ನು ಗುರುರಾಜ್ ಕಾಸರಗೋಡು ನೆರವೇರಿಸಿದರು.


ಕೃಷ್ಣಮೂರ್ತಿ, ರಾಮಚಂದ್ರ ಹೊಳ್ಳ, ಲೋಕೇಶ್, ರಾಜೇಶ್, ಉದಯ, ಶಂಕರ ಭಟ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಸಂಸ್ಥೆಯ ವತಿಯಿಂದ ಗೌರವ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯವರು ಶ್ರೀ ದೇವರ ಪ್ರಸಾದ ನೀಡಿ ಹರಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top