ಗ್ರಂಥಾಲಯ ಸಪ್ತಾಹ, ವಿವಿಧ ಸ್ಪರ್ಧೆಗಳ ಆಯೋಜನೆ

Upayuktha
0


ಸುರತ್ಕಲ್‌: ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಮಂಗಳೂರು ಇದರ ವತಿಯಿಂದ ಹೊಸಬೆಟ್ಟು ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ, ಓದುಗರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.


ಸಮಾರೋಪ ಸಮಾರಂಭದಲ್ಲಿ ಟಿ.ವಿ ನಿರೂಪಕ ಮತ್ತು ಹೆಚ್.ಪಿ.ಸಿ.ಎಲ್‌ನ ನಿವೃತ್ತ ಹಿರಿಯ ಪ್ರಬಂಧಕ ಪ್ರಕಾಶ್ ಮಾತನಾಡಿ, ಪುಸ್ತಕ ವಾಚನದ ಅಭಿರುಚಿಯನ್ನು ಮರು ರೂಢಿಸಿಕೊಳ್ಳುವ ಮೂಲಕ ಜ್ಞಾನದಾಹಿಗಳಾಗಬೇಕು ಎಂದರು.


ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಮಾತನಾಡಿ, ಡಿಜಿಟಲ್ ಯುಗದಲ್ಲಿ ಪುಸ್ತಕ ಹಾಗೂ ಪತ್ರಿಕೆಗಳ ಪ್ರಸ್ತುತತೆಯನ್ನು ಓದುಗ ವರ್ಗ ಅರಿತುಕೊಳ್ಳಬೇಕು ಎಂದರು.


ರಿಜೇಂಟ್ ಪಾರ್ಕ್ ಅಸೋಸಿಯೇಷನ್‌ನ ಅಧ್ಯಕ್ಷ ವೈ.ಎಂ ದೇವದಾಸ್ ಗ್ರಂಥಾಲಯದ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು. ಓದುಗ ಬಳಗದ ವಿನ್ಸೆಂಟ್ ಪಿಂಟೋ ಗ್ರಂಥಾಲಯದ ವಿಸ್ತರಣೆಗೆ ಸರ್ವರ ಸಹಾಯ ಅಗತ್ಯವಿದೆ ಎಂದರು.


ನವ ಮಂಗಳೂರು ಬಂದರು ಪ್ರಾಧಿಕಾರದ ನಿವೃತ್ತ ಅಧಿಕಾರಿ ಮಾಧವ ಕೋಟ್ಯಾನ್, ಸಾಹಿತಿ ಯೋಗೀಶ್ ಕಾಂಚನ್, ಗೋವಿಂದ ದಾಸ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಹರೀಶ್ ಕುಮಾರ್ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಆಕರ್ಷಕ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಗ್ರಂಥಪಾಲಕಿ ಚಂದ್ರಕಲಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top