ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ

Upayuktha
0


ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.


ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆಯ ಜೈನಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶಿವ ದುರ್ಗಾಂಬಾ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಾಜಿ ಸಚಿವ ಶ್ರೀ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು.



ಅದಾನಿ ಗ್ರೂಪ್‌ನ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷರಾದ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮೋಹನಂಗಯ್ಯ ಸ್ವಾಮಿ, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ವಕೀಲರ ಘಟಕ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ರಾಘವೇಂದ್ರ ರಾವ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಫ್ರಾಂಕಿ ಡಿಸೋಜ, ಕೊಳಲಗಿರಿ ಮತ್ತಿತ್ತರರು ಹಾಜರಿದ್ದರು. 


ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ 2025 ಪಡೆದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರಿಗೆ ಎಂಸಿಸಿ ಬ್ಯಾಂಕಿನ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯು ಕ್ರಮವಾಗಿ 17.11.2025 ಮತ್ತು 20.11.2025 ರಂದು ಬ್ಯಾಂಕಿನ ಆಡಳಿತ  ಕಚೇರಿಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿತ್ತು.


ಕಾರ್ಯಕ್ರಮದ ಸಂದರ್ಭದಲ್ಲಿ, ಅನಿಲ್ ಲೋಬೊ ಅವರನ್ನು ಮೆಚ್ಚುಗೆ ಮತ್ತು ಗೌರವದ ಸಂಕೇತವಾಗಿ ಶಾಲು, ಪುಷ್ಪಗುಚ್ಛ ಮತ್ತು ಸ್ಮರಣಿಕೆಯೊಂದಿಗೆ ಸನ್ಮಾನಿಸಲಾಯಿತು.


ಅನಿಲ್ ಲೋಬೊ ಅವರು ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರಿಗೆ ಸಮಾರಂಭವನ್ನು ಆಯೋಜಿಸಿದ್ದಕ್ಕಾಗಿ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸಿದರು ಮತ್ತು ಈ ಗೌರವವು ನಿರ್ದೇಶಕರು ಮತ್ತು ಸಿಬ್ಬಂದಿಯ ಪ್ರತಿಯೊಬ್ಬ ಸದಸ್ಯರ ಸಾಮೂಹಿಕ ಸಾಧನೆಯಾಗಿದೆ, ಎಲ್ಲರ ಸಮರ್ಪಿತ ಸೇವೆ ಬ್ಯಾಂಕಿನ ಪ್ರಗತಿಗೆ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು. ಎಂಸಿಸಿ ಬ್ಯಾಂಕ್ ಅನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಏರಿಸಲು ಮತ್ತು ಮುಂದಿನ ವರ್ಷಗಳಲ್ಲಿ ಸಂಸ್ಥೆಗೆ ಮತ್ತಷ್ಟು ಕೀರ್ತಿ ತರಲು ಆಡಳಿತ ಮಂಡಳಿಯು ತಮ್ಮ ಬದ್ಧ ಪ್ರಯತ್ನಗಳನ್ನು ಮುಂದುವರಿಸಲು ಕರೆ ನೀಡಿದರು. 


ಈ ಸಂದರ್ಭದಲ್ಲಿ ಎಲ್ಲಾ ನಿರ್ದೇಶಕರ ಪರವಾಗಿ ಮಾತನಾಡಿದ ನಿರ್ದೇಶಕ ಎಲ್ರಾಯ್ ಕೆ. ಕ್ರಾಸ್ಟೊ, ಬ್ಯಾಂಕಿನ ಅಧ್ಯಕ್ಷರ ಶ್ಲಾಘನೀಯ ಕೆಲಸಕ್ಕೆ ದೊರೆತ ಅರ್ಹವಾದ ಮನ್ನಣೆಗೆ ಸಂತೋಷ ವ್ಯಕ್ತಪಡಿಸಿದರು.


ಕಾರ್ಯಕ್ರಮವನ್ನು ರೋಶನ್ ಮಾಡ್ತಾ ನಿರೂಪಿಸಿದರು, 72 ನೇ ಸಹಕಾರ ಸಪ್ತಾಹ ಆಚರಣೆಯ ಸಂದರ್ಭದಲ್ಲಿ ಗೌರವಿಸಲ್ಪಟ್ಟ ಹತ್ತು ಗಣ್ಯ ವ್ಯಕ್ತಿಗಳಲ್ಲಿ ಅನಿಲ್ ಲೋಬೊ ಒಬ್ಬರು ಎಂದ ಅವರು ಇಡೀ ಬ್ಯಾಂಕಿಗೆ ಹೆಮ್ಮೆಯ ಕ್ಷಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಲ್ಲಾ ನಿರ್ದೇಶಕರು ಮತ್ತು ಆಡಳಿತ ಕಛೇರಿಯ ಸಿಬ್ಬಂದಿ ಸದಸ್ಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top