ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿ ಇಲ್ಲಿ “Update, Upgrade or be Obsoleteಬ–Skills to be Developed and Acquired in this Era” ಎಂಬ ವಿಶೇಷ ಕಾರ್ಯಾಗಾರ ಕಾಲೇಜಿನ ಟಿ.ಮೋಹನ್ ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು.
ಈ ಕಾರ್ಯಾಗಾರದಲ್ಲಿ ಸಾಫ್ಟ್ ಸ್ಕಿಲ್ಸ್ ತರಬೇತಿದಾರರಾದ ಚಂದನ್ ರಾವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತಮ್ಮ ಉಪನ್ಯಾಸದಲ್ಲಿ ಇಂದಿನ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ನವೀಕರಿಸಿಕೊಂಡುಹೋಗುವುದು, ಕೌಶಲ್ಯಗಳನ್ನು ಬೆಳಸಿಕೊಳ್ಳುವುದು ಮತ್ತು ಕಾಲದೊಡನೆಹೆಜ್ಜೆ ಹಾಕುವುದು ಅತ್ಯಂತ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಥಮ ಬಿಸಿಎ ವಿದ್ಯಾರ್ಥಿನಿ ಖುಷಿ ನಿರ್ವಹಿಸಿದರು. ಅತಿಥಿ ಪರಿಚಯವನ್ನು ಪ್ರಥಮ ಬಿಸಿಎ ವಿದ್ಯಾರ್ಥಿನಿ ಮೌಲ್ಯ ನೀಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


