ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ“X Factors of Excellence” ಎಂಬ ಪ್ರೇರಣಾದಾಯಕ ಕಾರ್ಯಾಗಾರವನ್ನು ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿಬ್ಲಾಕ್ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜೆ.ಸಿ.ಐ. ನ್ಯಾಷನಲ್ ಲೆವೆಲ್ ಟ್ರೈನರ್ ಮತ್ತುಮೋಟಿವೇಶನಲ್ ಸ್ಪೀಕರ್ ರಾಜೇಂದ್ರ ಭಟ್ ಕೆ. ಅವರು ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉತ್ಸಾಹಭರಿತ ಉಪನ್ಯಾಸನೀಡಿದರು. ಅವರು ಜೀವನದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಅಗತ್ಯವಾದವಿವಿಧ ಗುಣಗಳು, ಶಿಸ್ತು, ಸಮಯ ನಿರ್ವಹಣೆ ಮತ್ತು ಆತ್ಮವಿಶ್ವಾಸದಮಹತ್ವವನ್ನು ಮನದಟ್ಟುಗೊಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಪ್ರಥಮ ಬಿಬಿಎ ವಿದ್ಯಾರ್ಥಿ ಬ್ರಿಜೇ ಶ್ಶೆಟ್ಟಿ ನಿರ್ವಹಿಸಿದರು. ಅತಿಥಿ ಪರಿಚಯವನ್ನು ಪ್ರಥಮ ಬಿಬಿಎ ವಿದ್ಯಾರ್ಥಿ ಸುನಾಗ್ ಶೆಟ್ಟಿ ಮಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



