ಉಡುಪಿ: ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ,ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 2025–26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಯಾಯಿತು. ಈ ಶಿಬಿರ 20-11-2025ರಿಂದ 26-11-2025ರವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಜೆ ಇಲ್ಲಿ ನಡೆಯಲಿದೆ.
ಶಿಬಿರವನ್ನು ಉದಯ ಶೆಟ್ಟಿ ಮುನಿಯಾಲು, ಅಧ್ಯಕ್ಷರು, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ.) ಮುನಿಯಾಲು ಇವರು ಉದ್ಘಾಟಿಸಿ ಕಾರ್ಯಕ್ರಮದ ಮಹತ್ವವನ್ನು ಶ್ಲಾಘಿಸಿದರು. ಸಮಾಜಮುಖಿ ಚಟುವಟಿಕೆಗಳಿಗೆ ಇಂದಿನ ಕಾಲದಲ್ಲಿ ಎಲ್ಲರ ಸಹಕಾರ ಮತ್ತು ಬದ್ಧತೆ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವೆ— ಈ ಮೂರು ಕ್ಷೇತ್ರಗಳ ಬಲದಿಂದಲೇ ಒಂದು ಸಮೃದ್ಧ ಸಮಾಜವನ್ನು ನಿರ್ಮಿಸಬಹುದು ಎಂದು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ| ದೇವಿದಾಸ್ ಎಸ್. ನಾಯಕ್ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು. ಸಮಾಜಮುಖಿ ಕಾರ್ಯಕ್ರಮಗಳು ಸಮುದಾಯದ ಬಾಂಧವ್ಯವನ್ನು ಬಲಪಡಿಸುವ ಮಹತ್ವದ ವೇದಿಕೆಗಳು ಎಂದು ಅವರು ತಿಳಿಸಿದ್ದಾರೆ.
ಶಿಕ್ಷಣವು ಕೇವಲ ಜ್ಞಾನವಿತರಣೆಯ ಸಾಧನವಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನಕ್ಕೆ ದಾರಿ ತೋರುವ ಶಕ್ತಿಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ತಿಳಿದುಕೊಳ್ಳುವ ಅವಕಾಶ ದೊರೆಯುತ್ತದೆ ಎಂದು ಅವರು ಹೇಳಿದರು. ಸುಕೇಶ್ ಹೆಗ್ಡೆ, ಅಧ್ಯಕ್ಷರು, ಗ್ರಾಮ ಪಂಚಾಯತ್, ಕಡ್ತಲ, ಮಹೇಶ್ ಟಿ. ಎಂ.ಠಾಣಾಧಿಕಾರಿ, ಅಜೆಕಾರು, ಪೋಲಿಸ್ ಠಾಣೆ, ಯೋಗೀಶ್ ಮಲ್ಯ , ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಲಕ್ಷ್ಮೀ ಜನಾರ್ದನ ದೇವಸ್ಥಾನ, ಎಳ್ಳಾರೆ, ಹರೀಶ್ ಪಂಚಮಿ, ಪ್ರಧಾನ ಕಾರ್ಯದರ್ಶಿ, ಪಂಚಮಿ ಚಾರಿಟೇಬಲ್ಟ್ರಸ್ಟ್ (ರಿ.) ದೊಂಡೇರಂಗಡಿ, ಅಖಿಲೇಶ್ ಶೆಟ್ಟಿ, ಅಧ್ಯಕ್ಷರು, ಸಾರ್ವಜನಿಕ ಗಣೇಶೋತ್ಸವ ಸಮಿತಿ, ದೊಂಡೇರಂಗಡಿ, ವಾಮನ ಭಟ್, ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ದೊಂಡೆರಂಗಡಿ, ದಯಾನಂದ ನಾಯಕ್, ಮುಖ್ಯೋಪಾಧ್ಯಾಯರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದೊಂಡೇರಂಗಡಿ, ಪ್ರೊ| ವನಿತಾ ಮೈಯ್ಯ ಪ್ರಾಂಶುಪಾಲರು, ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು, ಉಡುಪಿ, ಡಾ| ಎಂ. ವಿಶ್ವನಾಥ ಪೈ, ಉಪಪ್ರಾಂಶುಪಾಲರು, ಮಹಾತ್ಮಗಾಂಧಿ ಸ್ಮಾರಕ ಕಾಲೇಜು, ಉಡುಪಿ, ಡಾ| ಪ್ರಭಾಕರ್ ಶಾಸ್ತ್ರಿ, ISA ಫೌಂಡೇಶನ್, ಮಣಿಪಾಲ ಉಪಸ್ಥಿತರಿದ್ದರು.
ಶಿಬಿರದಲ್ಲಿ ಗ್ರಾಮ ಸ್ವಚ್ಛತೆ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ, ಯುವಶಕ್ತಿ ವಿಕಾಸ ಮುಂತಾದ ಹಲವು ಸಮಾಜಮುಖಿ ಚಟುವಟಿಕೆಗಳನ್ನು ವಾರಪೂರ್ತಿ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಯಾದ ಸನತ್ ಕೋಟ್ಯಾನ್, ಯುವ ರೆಡ್ ಕ್ರಾಸ್ ಶಿಬಿರಾಧಿಕಾರಿಯಾದ ದೀಪಿಕಾ ಹಾಗೂ ರೋವರ್ಸ್–ರೇಂಜರ್ಸ್ ಶಿಬಿರಾಧಿಕಾರಿಗಳಾದ ಅಕ್ಷತಾ ನಾಯಕ್ ಹಾಗೂ ಸ್ಟಾಲಿನ್ ಡಾನ್ಸನ್ ಡಿಸೋಜಾ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpg)





