ಉಡುಪಿ ಅಜ್ಜರಕಾಡಿನಲ್ಲಿರುವ ಆಕಾಶವಾಣಿ ಎಫ್‌ಎಂ ರಿಲೇ ಕೇಂದ್ರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Upayuktha
0


ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಇಂದು ಉಡುಪಿಯ ಅಜ್ಜರಕಾಡಿನಲ್ಲಿರುವ ಅಕಾಶವಾಣಿ ಎಫ್.ಎಮ್. ಪ್ರಸಾರ ಕೇಂದ್ರಕ್ಕೆ ಭೇಟಿ ನೀಡಿದರು. ನೂತನವಾಗಿ ಮಂಜೂರಾಗಿರುವ 1KW FM Transmitter ಕಾಮಗಾರಿ ಹಾಗೂ ಶೀಘ್ರದಲ್ಲಿ ಕಾರ್ಯಾರಂಭ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.


ಮಂಗಳೂರಿನಿಂದ ಕಾರ್ಯಕ್ರಮ ಪ್ರಸಾರ ಹಾಗೂ ಬ್ರಹ್ಮಾವರ ಆಕಾಶವಾಣಿಯ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ವಿ. ಪ್ರಶಾಂತ್ ಕುಮಾರ್, ಸಹಾಯಕ ಅಭಿಯಂತರ ಬಾಬು ಪಟುವತಿ, ಪ್ರಸಾರ ನಿರ್ವಾಹಕ ಲತೀಶ್ ಪಾಲ್ದಾನೆ ಹಾಗೂ ತಾಂತ್ರಿಕ ವಿಭಾಗದ ಮುಖ್ಯಸ್ಥ ಅನಿಲ್ ರೈ ಮೊದಲಾದವರು ಉಪಸ್ಥಿತರಿದ್ದರು.



ಬಳಿಕ ಮಾತನಾಡಿದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ "ಉಡುಪಿ ಜಿಲ್ಲೆಗೆ ಮೂರು FM ಪ್ರಸಾರ ಕೇಂದ್ರಕ್ಕೆ ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಅದರಲ್ಲಿ ಒಂದು ಕೇಂದ್ರಕ್ಕೆ ಮಂಜೂರಾತಿ ದೊರಕಿದ್ದು, ಫೆಬ್ರವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಕಾರ್ಯಾರಂಭ ಮಾಡುವ ಬಗ್ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರಸ್ತುತ ಬೆಂಗಳೂರು ಆಕಾಶವಾಣಿಯ ಮೂಲಕ ಕಾರ್ಯಕ್ರಮಗಳು ಮರುಪ್ರಸಾರವಾಗುತ್ತಿದ್ದು, ಸ್ಥಳೀಯ ಪ್ತತಿಭೆಗಳಿಗೆ ಅವಕಾಶ ಒದಗಿಸುವ ಉದ್ದೇಶದಿಂದ, ಅದನ್ನು ಮಂಗಳೂರು ಅಕಾಶವಾಣಿಯ ಮೂಲಕ ಪ್ರಸಾರ ಮಾಡುವ ಕುರಿತು ಬೇಡಿಕೆಯಿದೆ, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸಾರ ಭಾರತಿಗೆ ಬೇಡಿಕೆ ಸಲ್ಲಿಸಲಾಗುವುದು. ಬ್ರಹ್ಮಾವರ ಆಕಾಶವಾಣಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top