ಮಂಗಳೂರು: ನಮೋ ಬ್ಯಾಡ್ಮಿಂಟನ್‌ ಟೂರ್ನಿಗೆ ಚಾಲನೆ

Upayuktha
0

ಫಿಟ್‌, ಯಂಗ್‌,  ಆತ್ಮನಿರ್ಭರ ಭಾರತದಿಂದ ಮಾತ್ರ ವಿಕಸಿತ ಭಾರತ ನಿರ್ಮಾಣ: ಸಂಸದ ಕ್ಯಾ. ಚೌಟ



ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯಪೂರ್ಣ ವಿಕಸಿತ ಭಾರತದ ಪರಿಕಲ್ಪನೆಯ ಸಂಸತ್‌ ಕ್ರೀಡೋತ್ಸವದ ಭಾಗವಾಗಿ ಇಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಟನ್‌ ಟೂರ್ನಮೆಂಟ್‌ನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಉದ್ಘಾಟಿಸಿದ್ದಾರೆ.


ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚಿಂತನೆಯ ವಿಕಸಿತ ಭಾರತ ನಿರ್ಮಾಣವಾಗಬೇಕಾದರೆ ಮೊದಲು ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಿದೆ. ಅಂಥಹ ಆರೋಗ್ಯವಂಥ ಭಾರತ ನಿರ್ಮಾಣದ ಪ್ರಯತ್ನವೇ ಈ ಸಂಸತ್‌ ಕ್ರೀಡೋತ್ಸವದ ಪ್ರಯುಕ್ತ ಆಯೋಜಿಸಿರುವ ಈ ನಮೋ ಕ್ರೀಡಾ ಸ್ಪರ್ಧೆಗಳು. ಕಳೆದ ವಾರ ನಮೋ ಚೆಸ್‌ ಟೂರ್ನಿ ಆಯೋಜಿಸಲಾಗಿದ್ದು, ಇದೀಗ ನಮೋ ಬ್ಯಾಡ್ಮಿಂಟನ್‌ ಪಂದ್ಯಾಟಕ್ಕೆ ಚಾಲನೆ ನೀಡಲಾಗಿದೆ. ನಾಳೆ(ನ.30) ನಮೋ ವಾಲಿಬಾಲ್‌ ಟೂರ್ನಿ ನಡೆಯಲಿದೆ ಎಂದು ಹೇಳಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಭಾರತ ದೇಶವು ಈಗ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯ ಹೆಜ್ಜೆ ಹಾಕುತ್ತಿದೆ. ಇಂಥಹ ಕಾಲಘಟದಲ್ಲಿ ಕೇವಲ ಫಿಟ್‌ ಇಂಡಿಯಾ ಭಾರತ ಮಾತ್ರ ವಿಕಸಿತ ಭಾರತವಾಗಿ ರೂಪುಗೊಳ್ಳುವುದಕ್ಕೆ ಸಾಧ್ಯ. ಅಲ್ಲದೇ ಕೇವಲ ಒಂದು ಯಂಗ್‌ ಇಂಡಿಯಾ ಮಾತ್ರ ವಿಕಸಿತ ಭಾರತವಾಗಲಿದೆ. ಹಾಗೆಯೇ ಒಂದು ಆತ್ಮನಿರ್ಭರ ಭಾರತ ಮಾತ್ರ ವಿಕಸಿತ ಭಾರತವಾಗಿ ನಿರ್ಮಾಣವಾಗುವುದಕ್ಕೆ ಸಾಧ್ಯ. ಹೀಗಿರುವಾಗ, ನಾವೆಲ್ಲ ಪ್ರಧಾನಿಯವರ ಕನಸಿತ ಆ ವಿಕಸಿತ ಭಾರತದ ಕನಸಿನತ್ತ ಹೆಜ್ಜೆ ಹಾಕುವುದಕ್ಕೆ ಕಾರ್ಯೋನ್ಮುಖರಾಗಬೇಕೆಂದು ಕ್ಯಾ. ಚೌಟ ಕರೆ ನೀಡಿದ್ದಾರೆ.


ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದ ಸಂಸತ್‌ ಕ್ರೀಡೋತ್ಸವು ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಉತ್ತೇಜನವನ್ನು ನೀಡುತ್ತಿದೆ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಬಹಳ ಯಶಸ್ವಿಯಾಗಿ ಈ ಸಂಸತ್‌ ಕ್ರೀಡಾ ಮಹೋತ್ಸವನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ನಾನು ವಿಶೇಷವಾದ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.


ಉದ್ಘಾಟನೆ ಬಳಿಕ ಕ್ಯಾ. ಬ್ರಿಜೇಶ್‌ ಚೌಟ ಹಾಗೂ ಶಾಸಕ ವೇದವ್ಯಾಸ ಕಾಮತ್‌ ಅವರು ಬ್ಯಾಡ್ಮಿಂಟನ್‌ ಆಟವಾಡಿ ಗಮನಸೆಳೆದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top