ಮನು ಇಡ್ಯಾರ ಎರಡು ತುಳು ನಾಟಕ ಕೃತಿಗಳ ಬಿಡುಗಡೆ

Upayuktha
0

ಕನ್ನಡ ನಾಟಕಗಳಿಗೆ ಸರಿಮಿಗಿಲಾಗಿ ತುಳು ನಾಟಕಗಳು ಬಂದಿವೆ: ಯು.ಕೆ ಕುಮಾರನಾಥ್


ಸುರತ್ಕಲ್‌: ತುಳು ಸಾಹಿತ್ಯ ಕ್ಷೇತ್ರಕ್ಕೆ ತುಳು ನಾಟಕಗಾರರ ಕೊಡುಗೆ ಅಪಾರವಾಗಿದ್ದು ಕನ್ನಡ ನಾಟಕ ಸಾಹಿತ್ಯಕ್ಕೆ ಸರಿ ಮಿಗಿಲು ಎಂಬಂತೆ ತುಳು ನಾಟಕಗಳು ಬಂದಿವೆ. ತುಳು ರಂಗ ಭೂಮಿಗೆ ವಿಶಿಷ್ಟ ಕೊಡುಗೆ ನೀಡಿದ ಕೃತಿಗಳು ಪ್ರಕಟಣೆಗೊಳ್ಳುವ ಅವಶ್ಯಕತೆ ಇದೆ. ಹೊಸ ಅಲೆಯ ತುಳುನಾಟಕಗಳನ್ನು ನೀಡಿದ ಮನು ಇಡ್ಯಾರ ನಾಟಕಗಳ ಅಧ್ಯಯನ ಮತ್ತು ರಂಗ ಪ್ರದರ್ಶನಗಳು ನಡೆಯುವ ಅಗತ್ಯವಿದೆ ಎಂದು ವಿಜಯ ಕರ್ನಾಟಕದ ನಿವೃತ್ತ ಸ್ಥಾನೀಯ ಸಂಪಾದಕ ಯು.ಕೆ. ಕುಮಾರನಾಥ ನುಡಿದರು.


ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಮನು ಇಡ್ಯಾರ 'ಗಂಧದ ಕೊರಡ್ 'ಮತ್ತು 'ತಾಂಗ್ ನಿರೆಲ್ 'ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಮನು ಇಡ್ಯಾರಿಗೆ ಚಾವಡಿ ತಮ್ಮನ ಸಮಾರಂಭದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.


ಅಕಾಡೆಮಿಯು ತುಳುನಾಡ ಸಂಸ್ಕೃತಿ, ಸಾಹಿತ್ಯ, ಜಾನಪದಕ್ಕೆ ಸಂಬಂಧಪಟ್ಟಂತೆ ವಿನೂತನ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವುದು ಶ್ಲಾಘನೀಯ. ತುಳು ಸಾಹಿತ್ಯದ ಪ್ರಸರಣ ವಿವಿಧ ಆಯಾಮಗಳಲ್ಲಿ ನಡೆಯಬೇಕು ಎಂದರು.


ಮನು ಇಡ್ಯಾರಿಗೆ 'ಚಾವಡಿ ತಮ್ಮನ' ಮಾಡಿ ಅಭಿನಂದಿಸಲಾಯಿತು. ಚಾವಡಿ ತಮ್ಮನದ ಅಭಿನಂದನಾ ನುಡಿಗಳನ್ನು ಆಡಿದ ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಅವರು ಮನು ಇಡ್ಯಾ ಅವರ ನಾಟಕಗಳ ವಸ್ತು ದೇಸಿಯ ತನದಿಂದ ಕೂಡಿದ್ದು ಭಾಷೆಯ ಪ್ರೌಡಿಮೆ, ರಂಗ ನಡೆಗಳಿಂದ ವಿಶಿಷ್ಟತೆಯನ್ನು ಪಡೆದಿವೆ ಎಂದರು.


ಸಿಂಗಾರ ಸುರತ್ಕಲ್ ಕಲಾ ಸಂಸ್ಥೆಯ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ ಮಾತನಾಡಿ, ಮನು ಇಡ್ಯಾರ ಐದು ದಶಕದ ರಂಗ ಪಯಣದಲ್ಲಿ ಪ್ರಯೋಗಶೀಲತೆ ಮೂಲಕ ಪ್ರಬುದ್ಧ ನಾಟಕಗಳನ್ನು ನೀಡಿದ್ದು ಅವರು ರಚಿಸಿದ ನಾಟಕಗಳ ಸಮಗ್ರ ಸಂಪುಟ ಬರಬೇಕಾಗಿದೆ ಎಂದರು.


ಇಡ್ಯಾ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷೆ ಯಮುನಾ ಶೇಖರ್ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ರಂಗಭೂಮಿ ವಿವಿಧ ಮಗ್ಗಲುಗಳ  ದಾಟಿ ಮುನ್ನಡೆಯುತ್ತಿರುವ ಇಂದಿನ ಸಂದರ್ಭದಲ್ಲಿ ಮನು ಇಡ್ಯಾರ ಕೊಡುಗೆ ನೆನಪಿಸುವ ಮತ್ತು ಅವರ ನಾಟಕಗಳನ್ನು ಪ್ರದರ್ಶನ ಮಾಡುವ ಕಾರ್ಯಗಳು ನಡೆಯಬೇಕಾಗಿದೆ. ತುಳು ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಕಲೆಗಳಿಗೆ ಶ್ರಮಿಸಿದ ಹಿರಿಯರನ್ನು ಗೌರವಿಸುವ ಕೃತಿಗಳನ್ನು ಪ್ರಕಟಿಸುವ ಕಾರ್ಯ ವನ್ನು ಅಕಾಡೆಮಿ ಮಾಡುತ್ತಿದೆ ಎಂದರು.


ಶ್ರೀ ನಾರಾಯಣ ಗುರು ಮಂದಿರ ಮತ್ತು ವಿಠೋಭ ರುಕುಮಾಯಿ ದೇಗುಲದ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಚಂದ್ರಶೇಖರ ನಾನಿಲ್ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಗುಣವತಿ ರಮೇಶ್ ಅಭಿನಂದನಾ ಪತ್ರ ವಾಚಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಮಧುಸೂದನ ಇಡ್ಯಾ ವಂದಿಸಿದರು.


ಸುಶೀಲ ಮನು ಇಡ್ಯಾ ಉಪಸ್ಥಿತರಿದ್ದರು. ಸದಸ್ಯರ ಸಂಚಾಲಕ ಮತ್ತು ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top