ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Upayuktha
0


ಮೂಡುಬಿದಿರೆ: ಭಾರತದ ಚಂದ್ರಮಾನವ ಎಂದು ಖ್ಯಾತಿ ಪಡೆದಿರುವ ಪದ್ಮಶ್ರೀ ಪುರಸ್ಕೃತ ಡಾ. ಮೈಲ್ಸ್ವಾಮಿ ಅನ್ನಾದುರೈ, ಶನಿವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಶಾಲೆಯಲ್ಲಿ   ನಿರ್ಮಿಸಲಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ, “ಇದು ಕೇವಲ ಖಗೋಳ  ಪ್ರಯೋಗಾಲಯವಲ್ಲ, ಇದು ನಮ್ಮ ಬಾಹ್ಯಾಕಾಶ ಸಾಧನೆಯತ್ತ ಭವಿಷ್ಯದ ದೃಢ ಹೆಜ್ಜೆಯಾಗಬಲ್ಲದು ಎಂದು ಆಶಿಸಿದರು.  


ಭಾರತವು ಇಂದು ಉಪಗ್ರಹ ಸಂವಹನದಿಂದ ನ್ಯಾವಿಗೇಶನ್ ವ್ಯವಸ್ಥೆ, ದೂರ ಸಂವಹನ, ಚಂದ್ರಯಾನ–ಮಂಗಳಯಾನ ಮುಂತಾದ ಸಾಧನೆಗಳ  ಮೂಲಕ ಜಗತ್ತನ್ನು ತನ್ನತ್ತಾ ಸೆಳೆಯುತ್ತಿದೆ.  


ಭಾರತದ ಶಿಕ್ಷಣ ಪದ್ದತಿಯನ್ನು ಉಲ್ಲೇಖಿಸಿದ ಅವರು, ಶಾಲೆಗಳು ಇಂದಿನ ಅಂತರಾಷ್ಟ್ರೀಯ ಚೆಸ್ ಗ್ರ‍್ಯಾಂಡ್‌ಮಾಸ್ಟರ್‌ಗಳನ್ನು ಹೊರತರುತ್ತಿದ್ದರೆ, ನಾಳೆಯ ವಿಜ್ಞಾನಿಗಳನ್ನು ಕೂಡ ರೂಪಿಸಬಲ್ಲ ಸಾಮಾರ್ಥ್ಯ ಹೊಂದಿದೆ  ಎಂದರು. ಭಾರತ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚಿದ ಸಾಧನೆಯನ್ನು ನೆನಪಿಸಿಕೊಂಡ ಅವರು “ಕೊಲಂಬಸ್ ಭಾರತವನ್ನು ಹುಡುಕುತ್ತ ಅಮೇರಿಕಾವನ್ನು ಕಂಡುಹಿಡಿದ. ಶತಮಾನಗಳ ನಂತರ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚುವಲ್ಲಿ ಅಮೇರಿಕಕ್ಕೆ ಸಾಧ್ಯವಾಗಲಿಲ್ಲ, ಆದರೆ ಭಾರತ ಅದನ್ನು ಸಾಧಿಸಿತು.” ಮುಂದಿನ ಯುಗದಲ್ಲಿ ಮಾನವ ವಿಸ್ತರಣೆಯ ಹೊಸ ಗಮ್ಯಸ್ಥಾನವಾಗಿ ಚಂದ್ರನು ‘ಮುಂದಿನ ಅಮೇರಿಕಾ’ ವಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟರು.


ಶ್ರೀ ಮಹಾವೀರ ಕಾಲೇಜಿನ ಅಮೆಚೂರ್ ಆಸ್ಟ್ರೋನಾಮರ್ಸ್ ಕ್ಲಬ್‌ನ ಸಂಯೋಜಕ ಡಾ. ರಮೇಶ್ ಭಟ್ ಮಾತನಾಡಿ,  ಬಾಹ್ಯಾಕಾಶ ಸಾಧನೆಯಲ್ಲಿ ಅಮೇರಿಕವು ಸಾಧಿಸದ ಹಂತವನ್ನೂ, ಭಾರತವು ತಲುಪಿದುದು ನಮ್ಮ ವಿಜ್ಞಾನಿಗಳ ಗುಣಮಟ್ಟಕ್ಕೆ ಸಾಕ್ಷಿ.  ಭಾರತೀಯ ಉಪಗ್ರಹ ತಂತ್ರಜ್ಞಾನದ ಕೀರ್ತಿಯನ್ನರಿತು ಅನೇಕ ದೇಶಗಳು ಭಾರತವನ್ನು ಸಹಯೋಗಕ್ಕಾಗಿ ಸಂಪರ್ಕಿಸುತ್ತಿವೆ ಎಂದರು.  


ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ,  ಜೀವನದಲ್ಲಿ ಯಶಸ್ಸು ಸಾಧಿಸಲು  ಪ್ರತಿಷ್ಟಿತ ಸಂಸ್ಥೆಗಳಲ್ಲೇ ಶಿಕ್ಷಣ ಪಡೆಯಬೇಕೆಂದೇನಿಲ್ಲ.  ಅನೇಕ ವಿಜ್ಞಾನಿಗಳು ಗ್ರಾಮೀಣ ಹಿನ್ನೆಲೆಯಿಂದ ಬಂದು ತಮ್ಮ ಶ್ರೇಷ್ಠತೆ ಮೆರೆದಿದ್ದಾರೆ.  ಒಮ್ಮೆ ಕನಸಿನಂತಿದ್ದ ಚಂದ್ರನ ತಲುಪುವುದು ಈಗ ಸಾಧ್ಯವಾಗಿರುವ ಕಾಲದಲ್ಲಿ, ಮುಂದಿನ ಪೀಳಿಗೆಯವರು ಅಂತರಿಕ್ಷ ಕಾಲೊನಿ ನಿರ್ಮಾಣದಂತಹ ದೊಡ್ಡ ಸವಾಲುಗಳಿಗೆ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಡಾ. ಮೈಲ್ಸ್ವಾಮಿ ಅನ್ನಾದುರೈಯನ್ನು ಆಳ್ವಾಸ್ ಸಂಸ್ಥೆಯ ಪರವಾಗಿ  ಸನ್ಮಾನಿಸಲಾಯಿತು.


ಮಂಗಳೂರಿನ ಸೇನಾ ನೇಮಕಾತಿ ಅಧಿಕಾರಿಗಳು, ಕರ್ನಲ್ ಸೋಮು ಮಹಾರಾಜ್, ಮೇಜರ್ ಅಭಿಜಿತ್ ಸಿಂಗ್, ನವ್ರಾಸ್ ಸ್ಪೇಸ್‌ಲ್ಯಾಬ್‌ನ ರವೀಂದ್ರನಾಥ್ ನಾಡೆಲ್ಲ  ಹಾಗೂ ಶ್ರವಣ್, ಶಾಲೆಯ ಆಡಳಿತಾಧಿಕಾರಿ ಪ್ರೀತಮ್ ಕುಂದರ್, ಮೆಂಟರ್ ಅಶ್ವಿನ್ ಪೈ,  ಪ್ರಾಂಶುಪಾಲೆ ಶೈಲಜಾ ಬೋಳ ಹೆಗ್ಡೆ ಇದ್ದರು. ಪ್ರಾಂಶುಪಾಲ ಮೊಹಮದ್ ಶಫಿ ಶೇಖ್ ಸ್ವಾಗತಿಸಿ,  ಉಪನ್ಯಾಸಕ ವಿರನ್ ಕರ‍್ಯಕ್ರಮ ನಿರೂಪಿಸಿದರು.  



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top