ಬೆಳ್ತಂಗಡಿ: ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಇತ್ತೀಚೆಗೆ ಜರುಗಿತು. ಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಚಂದ್ರಶೇಖರ್ ಇವರು ಕ್ರೀಡಾ ಜ್ಯೋತಿಯ ಮೂಲಕ ದೀಪ ಬೆಳಗಿ ಉದ್ಘಾಟಿಸುತ್ತಾ "ಗೆದ್ದರೆ ಅನುಭವ ಸಿಗುತ್ತದೆ ಸೋತರೆ ಜೀವನ ಪಾಠವಾಗುತ್ತದೆ. ಸೋಲು ಗೆಲುವುಗಳೆರಡನ್ನು ಸಮಾನವಾಗಿ ಸ್ವೀಕರಿಸಬೇಕು" ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಆ್ಯಂಟನಿ ಟಿ.ಪಿ. ಇವರು ಧ್ವಜಾರೋಹಣಗೈದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಬಗ್ಗೆ ಅಭಿಮಾನದ ಮಾತನ್ನಾಡಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕನ್ಯಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಪ್ರವೀಣ್ ವಿಜಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಜಿತ್ ಆರಿಗ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಪವಿತ್ರ ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಇವರು ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ. ಇವರು ವಂದಿಸಿದರು.
ವಾದ್ಯ ಘೋಷಗಳೊಂದಿಗೆ ಪಥ ಸಂಚಲನ ಬಹಳ ಆಕರ್ಷಕವಾಗಿತ್ತು. ಬೆಳ್ತಂಗಡಿ ಎಸ್‌ಡಿಎಂ ಸಂಸ್ಥೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಹಾಗೂ ಉಜಿರೆ ಜನಾರ್ಧನ ಶಾಲೆಯ ದೈಹಿಕ ಶಿಕ್ಷಕರಾದ ಗಿರೀಶ್ ಇವರ ಸಹಕಾರದಿಂದ ಕ್ರೀಡಾಕೂಟ ಯಶಸ್ವಿಯಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ






