ಮುಳಿಯ ಗೋಲ್ಡ್‌ & ಡೈಮಂಡ್ಸ್‌ ನಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

Upayuktha
0


ಪುತ್ತೂರು: ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಗೋಲ್ಡ್ ಅಂಡ್‌ ಡೈಮಂಡ್ಸ್‌ ವತಿಯಿಂದ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.


ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಮತ್ತು ಎಂ.ಡಿ ಕೃಷ್ಣನಾರಾಯಣ ಮುಳಿಯ ಅವರ ಸಮ್ಮುಖದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೆಂಕಟೇಶ ಸುಬ್ರಹ್ಮಣ್ಯ ಭಟ್ ಅವರು ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿ, ಬಳಿಕ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಮುಳಿಯ ಗೋಲ್ಡ್‌ ಅಂಡ್‌ ಡೈಮಂಡ್ಸ್‌ನ ಸಿಬ್ಬಂದಿಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ದಿನೇಶ್ ಕುಲಾಲ್‌ ಅವರು ಉಪಸ್ಥಿತರಿದ್ದರು.


Post a Comment

0 Comments
Post a Comment (0)
To Top