ಕುಕ್ಕೆ ಸುಬ್ರಹ್ಮಣ್ಯ: ದಕ್ಷಿಣ ಕನ್ನಡದ ಪ್ರಖ್ಯಾತ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನವೆಂಬರ್ 14ರಿಂದ ಡಿಸೆಂಬರ್ 2ರವರೆಗೂ ಸರ್ಪ ಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನವೆಂಬರ್ 16ರಿಂದ ಡಿಸೆಂಬರ್ 2ರವರೆಗೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 14ರಿಂದ ಡಿಸೆಂಬರ್ 2ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ ಎಂದು ತಿಳಿಸಿದೆ.
ನವೆಂಬರ್ 13ರಂದು ಆರಂಭವಾದ ಸರ್ಪಸಂಸ್ಕಾರ ಸೇವೆ ಕೊನೆಗೊಂಡಿದೆ. ನವೆಂಬರ್ 15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ ಪ್ರಸಾದ ವಿತರಣೆ, ನವೆಂಬರ್ 16ರಂದು ಕೊಪ್ಪರಿಗೆ ಏರಿ ಜಾತ್ರಾ ಮಹೋತ್ಸವ ಆರಂಭವಾಗುವುದರಿಂದ ನವೆಂಬರ್ 14ರಿಂದಲೇ ಸರ್ಪಸಂಸ್ಕಾರ ಸೇವೆ ಆರಂಭವಾಗುವುದಿಲ್ಲ. ಅಲ್ಲದೆ ಡಿಸೆಂಬರ್ 2ರಂದು ಕೊಪ್ಪರಿಗೆ ಇಳಿಯುವವರೆಗೆ ಸರ್ಪಸಂಸ್ಕಾರ ಇರುವುದಿಲ್ಲ.
ಇನ್ನು, ಚಂಪಾಷಷ್ಠಿ ಜಾತ್ರೋತ್ಸವವು ನವೆಂಬರ್ 16ರಿಂದ ಡಿಸೆಂಬರ್ 2ರವರೆಗೂ ನೆರವೇರಲಿದೆ. ಶ್ರೀಕ್ಷೇತ್ರದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಲಕ್ಷ ದೀಪ, ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಾತ್ರ ಕೆಲವೊಂದು ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶಗಳು ಇರುವುದಿಲ್ಲ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







