- ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕೆ ಪೂಜಾರಿ ಆಯ್ಕೆ
- ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ. ಎನ್ ಆಯ್ಕೆಯಾಗಿದ್ದಾರೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ಒಟ್ಟು 352 , ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರತಿಸ್ಪರ್ಧಿ ಶ್ರವಣ ಕುಮಾರ್ ಪರಾಭವಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರೆ, ವಿಲ್ಫೆಡ್ ಡಿಸೋಜ, ರಾಜೇಶ್ ಶೆಟ್ಟಿ, ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಐ.ಬಿ. ಸಂದೀಪ್ ಕುಮಾರ್, ಗಂಗಾಧರ ಕಲ್ಲಪಳ್ಳಿ ಪರಾಭವಗೊಂಡಿದ್ದಾರೆ.
ಕಾರ್ಯದರ್ಶಿ ಯಾಗಿ ಸಿದ್ದಿಕ್ ನೀರಾಜೆ, ಸುರೇಶ್ ಡಿ ಪಳ್ಳಿ, ಸತೀಶ್ ಇರಾ ಆಯ್ಕೆ ಯಾಗಿದ್ದಾರೆ. ರಾಜೇಶ್ ದಡ್ಡಂಗಡಿ ಪರಾಭವಗೊಂಡಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರಿಗಾಗಿ ನಡೆದ ಚುನಾವಣೆಯಲ್ಲಿ ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ, ಸಂದೀಪ್ ಕುಮಾರ್, ಲಕ್ಷ್ಮೀ ನಾರಾಯಣ, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಸಿರ್ಸಿಕರ, ಅಭಿಷೇಕ್ ಎಚ್.ಎಸ್, ಜಯಶ್ರೀ, ಭುವನೇಶ್ವರ, ಸಂದೀಪ್ ವಾಗ್ಲೆ, ಹರೀಶ್ ಕೆ ಆದೂರು, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ನಡೆದ ಕರ್ನಾಟಕ ರಾಜ್ಯ ಜಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಒಂದು ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಅನ್ಸಾರ್ ಇನೋಳಿ ಪರಾಭವ ಗೊಂಡಿದ್ದಾರೆ.
ದಕ್ಷಿಣ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



