ಮಂಗಳೂರು: ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ನೂತನ ಅಧ್ಯಕ್ಷರಾಗಿ 'ವಾರ್ತಾ ಭಾರತಿ ಪತ್ರಿಕೆಯ ಪುಷ್ಪರಾಜ್ ಬಿ.ಎನ್ ಆಯ್ಕೆಯಾಗಿದ್ದಾರೆ.
ಅವರನ್ನು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ ಸದಾನಂದ ಪೆರ್ಲ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಮಂಗಳೂರಿನ ಓಷನ್ ಪರ್ಲ್ ಹೋಟೆಲ್ ನಲ್ಲಿ ನವಂಬರ್ 11 ನಡೆದ ಎಲ್ಲ ಸಮಾರಂಭದಲ್ಲಿ ಪುಷ್ಪರಾಜ್ ಹಾಗು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಗೆ ಆಯ್ಕೆ ಹೊಂದಿದ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ಶಾಲು ಹಾಗೂ ಕೃತಿ ನೀಡಿ ಹಾರ್ದಿಕವಾಗಿ ಸನ್ಮಾನಿಸಲಾಯಿತು.
2025–28ರ ಅವಧಿಗೆ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾ ಭಾರತಿ ಪತ್ರಿಕೆ ಬ್ಯೂರೋ ಮುಖ್ಯಸ್ಥ ಪುಷ್ಪರಾಜ್ ಬಿ.ಎನ್. ರಾಜ್ಯ ಕಾರ್ಯಕಾರಿಣಿಗೆ ಶ್ರೀನಿವಾಸ ನಾಯಕಿ ಇಂದಾಜೆ ಆಯ್ಕೆಯಾಗಿರುವುದು ಸಂತಸ ತಂದಿದೆ. ಅವರ ಅವಧಿಯಲ್ಲಿ ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಮತ್ತು ಸಮಾಜಮುಖಿ ಚಿಂತನೆಗಳನ್ನು ಅನುಷ್ಠಾನ ಮಾಡಲಿ ಎಂದು ಡಾ.ಪೆರ್ಲ ಹಾರೈಸಿದರು.
ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಉದ್ಯಮಿಗಳಾದ ಪುಷ್ಪರಾಜ ಜೈನ್ , ಕದ್ರಿ ಪೊಲೀಸ್ ಠಾಣೆಯ ಎಸ್ ಐ ಮನೋಹರ ಪ್ರಸಾದ್ ಹಾಗೂ ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟಾ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




