ಸುರತ್ಕಲ್: ಸುರತ್ಕಲ್ ರೈಲು ನಿಲ್ದಾಣಕ್ಕೆ ಹೋಗುವ ಮುಖ್ಯರಸ್ತೆ ಇತ್ತೀಚಿಗೆ ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ ದಿನವು ನೂರಾರು ಪ್ರಯಾಣಿಕರು ಈ ದಾರಿಯನ್ನು ಬಳಕೆ ಮಾಡುತ್ತಿದ್ದು ಹಿರಿಯ ನಾಗರಿಕರು ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಸಂಚರಿಸುವುದು ಕಷ್ಟಕರವಾಗಿದೆ. ರಸ್ತೆಯ ಮೇಲೆ ಅನೇಕ ಗುಂಡಿಗಳು ಪ್ರಯಾಣಿಕರು ಸರಿಯಾದ ಸಮಯಕ್ಕೆ ನಿಲ್ದಾಣ ತಲುಪಲಾಗುತ್ತಿಲ್ಲ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಸ್ವಚ್ಛ ನಗರ ಯೋಜನೆಗಳಿಗೆ ಕೋಟಿ ಕೋಟಿ ಹಣ ವೆಚ್ಚವಾಗುತ್ತಿರುವ ಈ ಸಂದರ್ಭದಲ್ಲಿ ನಿಲ್ದಾಣ ರಸ್ತೆಯಂತಹ ಪ್ರಮುಖ ಸ್ಥಳಗಳು ನಿರ್ಲಕ್ಷಕ್ಕೆ ಒಳಗಾಗಿರುವುದು ನೋವಿನ ಸಂಗತಿ.
ಪ್ರತಿದಿನ ಪ್ರಯಾಣಿಕರು ತಮ್ಮ ಚೀಲಗಳೊಂದಿಗೆ ರಸ್ತೆಯ ಗುಂಡಿಗಬ್ಬಿಗಳಲ್ಲಿ ಜಾರುವುದು ಸಾಮಾನ್ಯ ಹಿರಿಯರು ಬಿದ್ದು ಗಾಯಗೊಂಡ ಘಟನೆಗಳು ನಡೆದಿವೆ. ಆದ್ದರಿಂದ ನಗರ ಪಾಲಿಕೆ ಮತ್ತು ಸಾರ್ವಜನಿಕ ಕಾಮಗಾರಿಗಳ ಇಲಾಖೆಯ ಗಮನವನ್ನು ಈ ಸಮಸ್ಯೆಯತ್ತ ಸೆಳೆಯಲು ಮನವಿ ಮಾಡುತ್ತಿದ್ದೇವೆ. ತಕ್ಷಣ ರಸ್ತೆ ಮರುಪೂರಕ ಕೆಲಸ ಸ್ವಚ್ಛತೆ ಮತ್ತು ಬೀದಿ ದೀಪಗಳ ದುರಸ್ತಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು.
-ಶ್ರಾವ್ಯ ಎಸ್ ಆಚಾರ್ಯ,
ಮಂಗಳೂರು ವಿವಿ ವಿದ್ಯಾರ್ಥಿನಿ
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







