ರಸ್ತೆ ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಸಾವು

Upayuktha
0


ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.


ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರಗಿಯಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರದತ್ತ ಹೊರಟಿದ್ದರು.


ಸಂಜೆ 5.30ರ ಸುಮಾರಿಗೆ ಗೌನಹಳ್ಳಿ ಬಳಿ  ಕುಟುಂಬವಿದ್ದ ಇನ್ನೋವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು.


ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top