ಎಸ್.ಎಲ್. ವರಲಕ್ಷ್ಮೀ ಮಂಜುನಾಥ್ ಅವರಿಗೆ ರಾಷ್ಟ್ರಕವಿ ಕುವೆಂಪು ಸ್ಮಾರಕ ಪ್ರಶಸ್ತಿ ಪ್ರದಾನ

Upayuktha
0


ಬೆಂಗಳೂರು: ಬಾಷ್ ಸಂಸ್ಥೆಯ ಮೈಕೋ ಕನ್ನಡ ಬಳಗದ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ಸ್ಮಾರಕ ಪ್ರಶಸ್ತಿಗೆ ಮೈಸೂರಿನ ಲೇಖಕಿ ಶ್ರೀಮತಿ ಎಸ್.ಎಲ್. ವರಲಕ್ಷ್ಮೀ ಮಂಜುನಾಥ್ ಭಾಜನರಾಗಿದ್ದು ನ. 19 ರಂದು ಬಾಷ್ ಬಿಡದಿ ಘಟಕದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಗೌಡರು ಹಾಗೂ ಬಾಷ್ ಗ್ಲೋಬಲ್ ಸಾಫ್ಟ್ ವೇರ್ ಟೆಕ್ನಾಲಜೀಸ್ ನ ಅಧ್ಯಕ್ಷ ದತ್ತಾತ್ರಿ ಸಾಲಗಾಮೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.


ಪ್ರಶಸ್ತಿಗಳು ತಲಾ 10 ಸಾವಿರ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಕಾರ್ಯಕ್ರಮದಲ್ಲಿ ಮೈಕೋ ಕನ್ನಡ ಬಳಗದ ಗೌರವಾಧ್ಯಕ್ಷರಾದ ಡಾ. ಪದ್ಮಿನಿ ನಾಗರಾಜು ಹಾಗೂ ಅಧ್ಯಕ್ಷರಾದ ಶ್ರೀರಾಮತೀರ್ಥ, ವಿಶೇಷ ಆಹ್ವಾನಿತರಾಗಿದ್ದ ಪದ್ಮಶ್ರೀ ಪುರಸ್ಕೃತರಾದ ರಾಜಣ್ಣ ಹಾಗೂ ಬಳಗದ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top