ಉಜಿರೆ: ಉಜಿರೆಯ ಎಸ್.ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ವ್ಯುತ್ಪತ್ತಿ ಸಂಘದ ವತಿಯಿಂದ ಸಂವಿಧಾನ ದಿನಾಚರಣೆ ಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಭಾರತ ಸಂವಿಧಾನ ರಚನೆಯ ಹಿನ್ನೆಲೆ ಮತ್ತು ಸಂವಿಧಾನ ದಿನಾಚರಣೆಯ ಮಹತ್ವವನ್ನು ವಿವರಿಸಿ, ಸಂವಿಧಾನದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು, ಅದರ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆ ಬಗ್ಗೆ ಜಾಗೃತಿ ಮೂಡಿಸುವುದು ಸಂವಿಧಾನ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಬಳಿಕ ತುಳು ಭಾಷೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿ, ವಿದ್ಯಾರ್ಥಿಗಳು ಒಟ್ಟಾಗಿ ಸಂವಿಧಾನದ ಮುನ್ನುಡಿಯನ್ನು ಪಠಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಉಪನ್ಯಾಸಕಿ ದಿವ್ಯಾ ಕುಮಾರಿ ಮಾತನಾಡಿ, ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಬಗ್ಗೆ ವಿವರಿಸಿದರು ವಿದ್ಯಾರ್ಥಿ ಪ್ರಣವ್ ಭಟ್ ಮೂಲಭೂತ ಹಕ್ಕುಗಳನ್ನು ಪರಿಚಯಿಸಿದರು.
ಉಪನ್ಯಾಸಕಿ ಡಾ.ಸಾಜಿದಾ ಸ್ವಾಗತಿಸಿ ಶ್ಯಾಮಿಲಾ ವಂದಿಸಿದರು. ಉಪನ್ಯಾಸಕರಾದ ಡಾ. ಮಹಾವೀರ ಜೈನ್ ಹಾಗೂ ವಿಶ್ವನಾಥ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಉಜಿರೆ,ದಿ.26 : ಉಜಿರೆಯ ಎಸ್.ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ವ್ಯುತ್ಪತ್ತಿ ಸಂಘದ ವತಿಯಿಂದ ಸಂವಿಧಾನ ದಿನಾಚರಣೆ ಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಭಾರತ ಸಂವಿಧಾನ ರಚನೆಯ ಹಿನ್ನೆಲೆ ಮತ್ತು ಸಂವಿಧಾನ ದಿನಾಚರಣೆಯ ಮಹತ್ವವನ್ನು ವಿವರಿಸಿ, ಸಂವಿಧಾನದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು, ಅದರ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆ ಬಗ್ಗೆ ಜಾಗೃತಿ ಮೂಡಿಸುವುದು ಸಂವಿಧಾನ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಬಳಿಕ ತುಳು ಭಾಷೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿ, ವಿದ್ಯಾರ್ಥಿಗಳು ಒಟ್ಟಾಗಿ ಸಂವಿಧಾನದ ಮುನ್ನುಡಿಯನ್ನು ಪಠಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಉಪನ್ಯಾಸಕಿ ದಿವ್ಯಾ ಕುಮಾರಿ ಮಾತನಾಡಿ, ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಬಗ್ಗೆ ವಿವರಿಸಿದರು ವಿದ್ಯಾರ್ಥಿ ಪ್ರಣವ್ ಭಟ್ ಮೂಲಭೂತ ಹಕ್ಕುಗಳನ್ನು ಪರಿಚಯಿಸಿದರು.
ಉಪನ್ಯಾಸಕಿ ಡಾ.ಸಾಜಿದಾ ಸ್ವಾಗತಿಸಿ ಶ್ಯಾಮಿಲಾ ವಂದಿಸಿದರು. ಉಪನ್ಯಾಸಕರಾದ ಡಾ. ಮಹಾವೀರ ಜೈನ್ ಹಾಗೂ ವಿಶ್ವನಾಥ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ