ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ನಿರ್ಮಾತೃಗಳು: ತನ್ವೀರ್ ಅಹಮ್ಮದ್ ಉಲ್ಲಾ

Upayuktha
0

ಎಸ್.ಡಿ.ಎಂ ಪ.ಪೂರ್ವ ಕಾಲೇಜು: ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ



ಉಜಿರೆ: ನಾನು ಮಾಡುತ್ತೇನೆ ಮುಂದೆ ಸಾಗುತ್ತೇನೆ ಎಂಬ ಪ್ರಯತ್ನ ಮತ್ತು ಮನೋಶಕ್ತಿ ಇದ್ದರೆ, ಸಾಧನೆಗೆ ಯಾವುದೂ ಅಸಾಧ್ಯವಲ್ಲ. ಎಲ್ಲವು ನಮ್ಮ ಕೈಯಲ್ಲಿಯೇ ಇದೆ. ನಾವು ನಮ್ಮ ಬದುಕಿನ ಉದ್ದೇಶ ಮತ್ತು ಗುರಿಯನ್ನು ದೃಢ ಮಾಡಿಕೊಂಡು ಹೆಜ್ಜೆ ಹಾಕಬೇಕು. ಯುವ ಸಮುದಾಯದ ಸಹಕಾರ ಮತ್ತು ಕೊಡುಗೆ ಈ ಸಮಾಜಕ್ಕೆ ಅನಿವಾರ್ಯವಿದೆ. ವಿದ್ಯಾರ್ಥಿಗಳು ಈ ದೇಶದ  ಭವಿಷ್ಯದ ನಿರ್ಮಾತೃಗಳು ಎಂದು ಅಂಕಣಕಾರ, ರಾಷ್ಟ್ರೀಯ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ  ಅಭಿಪ್ರಾಯ ಪಟ್ಟರು.


ಇವರು ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ವತಿಯಿಂದ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಭ್ಯಾಗತರಾಗಿದ್ದ ಕಾರ್ಯನಿರತ ನ್ಯಾಯಾಧೀಶರಾದ ವಾಸಿಮ್ ಅಹಮ್ಮದ್ ಖಾನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ‌ ಕೌಶಲ್ಯಗಳು ಅಗತ್ಯ. ಭವಿಷ್ಯದ ಗುರಿಯನ್ನು ಬೆನ್ನತ್ತಲು ನಾವು ಇಂದಿನಿಂದಲೇ ಗುರುಹಿರಿಯರ ಮಾರ್ಗದರ್ಶನದಲ್ಲಿ ಪ್ರಯತ್ನ, ತ್ಯಾಗ ಮತ್ತು ಶ್ರಮ ಜೀವಿಗಳಾಗಬೇಕು ಎಂದರು. ಮತ್ತೊರ್ವ ಅಭ್ಯಾಗತರಾಗಿದ್ದ ಖ್ಯಾತ ವಿಜ್ಞಾನಿ ಅಂಝತ್ ಪಾಶ ಮಾತನಾಡಿ, ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಅರಿವು ಮತ್ತು ಅಂದಾಜು ಇರಬೇಕು. ಪ್ರತಿಭೆ ಮತ್ತು ಕೌಶಲ್ಯವಂತರಾದರೆ ವಿಫುಲವಾದ ಅವಕಾಶಗಳಿವೆ ಎಂದರು. ಕಾರ್ಯಕ್ರಮದಲ್ಲಿ ಉದ್ಯಮಿ ರಾಕೇಶ್ ಜೈನ್ ಮಾತನಾಡಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಕಾನೂನು ಅರಿವು, ರಾಷ್ಟ್ರ ಚಿಂತನೆ ಸೇರಿದಂತೆ ಇತರೆ ವಿಚಾರಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಿದ್ದರು. ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಪೂರನ್ ವರ್ಮ ಸೇರಿದಂತೆ ಉದ್ಯಮಿ ತಿಮ್ಮಯ್ಯ ಕೊಂಡವಾಡಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಸೇರಿದಂತೆ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಉಪನ್ಯಾಸಕಿ ದಿವ್ಯ ಕುಮಾರಿ ‌ಹಾಗು ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ನಿರೂಪಿಸಿ, ವಂದಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಾಗುತ್ತಿರುವ ಎಸ್.ಡಿ.ಎಂ ಶಿಕ್ಷಣಗಳು , ಇಲ್ಲಿನ ಮೌಲ್ಯಯುತ ಶಿಕ್ಷಣ ಮತ್ತು ಸಂಸ್ಕಾರ ಎಲ್ಲವು ಭಿನ್ನ ಮತ್ತು ವಿಶೇಷ. ಸಂಸ್ಥೆಯೂ ವಿದ್ಯಾರ್ಥಿಗಳಲ್ಲಿ ಜ್ಞಾನವನ್ನು ಬಿತ್ತರಿಸುವ ಜೊತೆಗೆ‌ ಸದಾ ಸಮಾಜಮುಖಿ ಚಿಂತನೆಗಳನ್ನು ಬೆಳೆಸುತ್ತಿದೆ. ಇಲ್ಲಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಈ ಸಮಾಜದ ಬಹುದೊಡ್ಡ ಆಸ್ತಿ.

                                                                                                              - ತನ್ವೀರ್ ಅಹಮ್ಮದ್ ಉಲ್ಲಾ

                                                                                                                ( ರಾಷ್ಟ್ರೀಯ ಚಿಂತಕರು )



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top