ನೈಋತ್ಯ ವಲಯ ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಎಸ್ ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ಗೆ ಪ್ರಥಮ ಸ್ಥಾನ

Upayuktha
0


ಮಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಎಐಸಿಟಿಇ, ನವದೆಹಲಿ, ಎಂ.ಒ.ಇ. ಇನ್ನೊವೇಶನ್ ಸೆಲ್ ಇವುಗಳ ಸಹಯೋಗದಲ್ಲಿ ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೈಋತ್ಯ ವಲಯದ ಇನ್ಸ್ಟಿಟ್ಯೂಷನ್ಸ್ ಇನ್ನೊವೇಶನ್ ಕೌನ್ಸಿಲ್ ನ ಪ್ರಾದೇಶಿಕ ಸಮ್ಮೇಳನದಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಐಐಸಿ ಚಟುವಟಿಕೆಗಳನ್ನು ಬಿಂಬಿಸುವ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಮೂಡಬಿದಿರೆಯ ಎಸ್ ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ನ ಅಂತಿಮ ವರ್ಷ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಕುಮಾರಿ ಚಿತ್ರಶ್ರೀ ಅವರಿಗೆ ಪ್ರಥಮಸ್ಥಾನ ಲಭಿಸಿದೆ. ಅವರಿಗೆ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ ವಿಭಾಗದ  ಉಪನ್ಯಾಸಕರಾದ  ಹರ್ಷ ಹಾಗೂ ಜ್ಯೋತಿ ಸಹಕರಿಸಿದ್ದರು.


ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕರಾದ ಪ್ರೊ. ವೈ. ವೃಷಭೇಂದ್ರಪ್ಪ, ಹಾಗೂ ಐಐಸಿ ಸಂಚಾಲಕರಾದ ಡಾ. ವಿನುತಾ ಎಚ್ ಪಿ ಪ್ರಶಸ್ತಿ ವಿತರಿಸಿದರು.


ರಾಜ್ಯ ಮಟ್ಟದ ಈ ಪ್ರಶಸ್ತಿ ಗೌರವವನ್ನು ಪಡೆದ ಎಸ್ ಎನ್. ಮೂಡಬಿದ್ರಿ ಪಾಲಿಟೆಕ್ನಿಕ್ ನ‌ ಐಐಸಿ ಯ ಈ ಸಾಧನೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಹಾಗೂ ಪ್ರಾಂಶುಪಾಲರಾದ ನೊರೊನ್ಹಾ ತರೀನಾ ರೀಟಾ ಶ್ಲಾಘಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top