“ಇನ್‌ಸ್ಪೈರ್ 25”: ಶ್ರೀನಿವಾಸ್ ಯೂನಿವರ್ಸಿಟಿ ತಂತ್ರಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ, ಸಾಂಸ್ಕೃತಿಕ, ಕ್ರೀಡಾ ಉತ್ಸವ

Upayuktha
0


ಮಂಗಳೂರು: ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಪಿಯು (ಪದವಿ ಪೂರ್ವ) ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಮಟ್ಟದ “ಇನ್‌ಸ್ಪೈರ್” (INSPIRE 2025) ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪ್ರೊ. ಶ್ರೀಮತಿ ಹೆಚ್. ಹೆಚ್. ರಾಜೇಶ್ವರಿಯವರು ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ, ಕುಲಸಚಿವರಾದ ಡಾ. ಅನಿಲ್ ಕುಮಾರ್, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಎನ್ ಹೆಗಡೆ, ಇನ್‌ಸ್ಪೈರ್ -25 ಕಾರ್ಯಕ್ರಮದ ಸಂಚಾಲಕ ಪ್ರೊ. ವಿಶ್ವಾಸ್ ಸಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದ ಸಂಚಾಲಕರಾದ ಪ್ರೊ. ವಿಶ್ವಾಸ್ ಸಿ. ಶೆಟ್ಟಿ ಯವರು ಸ್ವಾಗತ ಭಾಷಣವನ್ನು ಮಾಡಿದರು. ಕುಮಾರಿ ಧನ್ಯಶ್ರೀ ರಾವ್ ಪ್ರಾರ್ಥನೆಯನ್ನು ಮಾಡಿದರು. ಪ್ರೊ. ಕೆ. ಶ್ರೀನಾಥ್ ರಾವ್ ರವರು ಮುಖ್ಯ ಅತಿಥಿಗಳನ್ನು ಹಾಗೂ ಕಾರ್ಯಕ್ರಮದ ಅಧ್ಯಕ್ಷರನ್ನು ಸಭೆಗೆ ಪರಿಚಯಿಸಿದರು.


ಉದ್ಘಾಟನಾ ಭಾಷಣವನ್ನು ಮಾಡಿದ ಮುಖ್ಯ ಅತಿಥಿ ಪ್ರೊ. ಶ್ರೀಮತಿ ಹೆಚ್. ಹೆಚ್. ರಾಜೇಶ್ವರಿ ಯವರು ಮಾತನಾಡಿ, ಸಮಾರಂಭದಲ್ಲಿ ನೆರೆದ ಸಾವಿರಾರು ವಿದ್ಯಾರ್ಥಿಗಳನ್ನು ಹಾಗೂ ಕಾರ್ಯಕ್ರಮದ ಆಯೋಜಕರನ್ನು ಅಭಿನಂದಿಸಿದರು. ಇಂದಿನ ಕಾಲದಲ್ಲಿ ತಂತ್ರಜ್ಞಾನವು ವೇಗವಾಗಿ ಪ್ರಗತಿಯನ್ನು ಸಾಧಿಸುತ್ತಿರುವುದರಿಂದ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು, ಹಾಗೆಯೆ, ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವುದಕ್ಕೆ ನಾವು ವಿಶೇಷ ಗಮನ ನೀಡಬೇಕು. ಇನ್‌ಸ್ಪೈರ್ (INSPIRE) ನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಪ್ರೇರೇಪಿಸಿ ಉತ್ತೇಜಿಸುವುದರ ಜೊತೆಗೆ ಅವರನ್ನು ಭವಿಷ್ಯದ ಮುಂಚೂಣಿಯ ತಂತ್ರಜ್ಞರನ್ನಾಗಿ ರೂಪಿಸುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಿದರು. 


ಉಪಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ ಹಾಗೂ ಕುಲಸಚಿವರಾದ ಡಾ. ಅನಿಲ್ ಕುಮಾರ್ ರವರು ಸ್ಪರ್ಧಾಳುಗಳಿಗೆ ಶುಭವನ್ನು ಕೋರಿದರು.




ಅಧ್ಯಕ್ಷೀಯ ಭಾಷಣವನ್ನು ಮಾಡಿದ ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ರವರು ಮಾತನಾಡಿ, ಶ್ರೀನಿವಾಸ ವಿಶ್ವವಿದ್ಯಾಲಯವು “ವಿಶನ್ ಯಂಗ್ ಇಂಡಿಯಾ” ಹಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ, ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ನಾವು ಕೌಶಲ್ಯಾಭಿವೃದ್ಧಿ ಮತ್ತು ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ವಿಶೇಷ ಮಹತ್ವವನ್ನು ನೀಡುತ್ತಿದ್ದೇವೆ, ಹಾಗೂ ಅವುಗಳಿಗೆ ಅಗತ್ಯವಾದ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ. ನಿರಂತರ ಅಧ್ಯಯನ, ಸಂಶೋಧನೆ ಹಾಗೂ ಬದಲಾಗುತ್ತಿರುವ ತಂತ್ರಜ್ಞಾನವನ್ನು ಕಲಿಯುವುದು ಅತ್ಯಂತ ಮುಖ್ಯ. ಆದ್ದರಿಂದ, ರೋಬೋಟಿಕ್ಸ್, ಕೃತಕ ಬುದ್ದಿಮತ್ತೆ, ಯಂತ್ರ ಅಧ್ಯಯನ ಮತ್ತು ವಿಮಾನ ನಿರ್ವಹಣಾ ಇಂಜಿನಿಯರಿಂಗ್ ಸೇರಿದಂತೆ ಇತ್ತೀಚಿನ ಹಾಗೂ ಮುಂದಿನ ತಲೆಮಾರಿನ ಅವಶ್ಯಕತೆಗಳಿಗೆ ಅನುಕೂಲಕರವಾದ ತಾಂತ್ರಿಕ ಕೋರ್ಸ್‌ಗಳನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತಿದೆ ಎಂದು ಹೇಳಿದರು, ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಅಭಿನಂದಿಸಿದರು.


ಇದೇ ಸಂದರ್ಭದಲ್ಲಿ, ಪದವಿಪೂರ್ವ ಶಿಕ್ಷಣ ಕ್ಷೇತ್ರದಲ್ಲಿ 32 ವರ್ಷಗಳ ಅಪಾರ ಅನುಭವವನ್ನು ಹೊಂದಿ, ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರೊ. ಶ್ರೀಮತಿ ಹೆಚ್. ಹೆಚ್. ರಾಜೇಶ್ವರಿ ಯವರನ್ನು ಸನ್ಮಾನಿಸಲಾಯಿತು.


ಕುಮಾರಿ ಲಾವಣ್ಯ ಡಿಸೋಜಾ ಧನ್ಯವಾದ ಸಮರ್ಪಿಸಿದರು. ಪ್ರೊ. ರೋಹನ್ ಫೆರ್ನಾಂಡಿಸ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕರಾದ ಡಾ. ಪ್ರವೀಣ್ ಬಿ. ಎಂ., ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬಂದಿಗಳು ಉಪಸ್ಥಿತರಿದ್ದರು.


ಈ ತಾಂತ್ರಿಕ ಉತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 75 ಕ್ಕೂ ಅಧಿಕ ಪದವಿಪೂರ್ವ ಕಾಲೇಜುಗಳ ಸುಮಾರು 1,350 ವಿದ್ಯಾರ್ಥಿಗಳು ತಾಂತ್ರಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಉಡುಪಿ ಪೂರ್ಣಪ್ರಜ್ಞ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಂದನ ಪಿಯು ಕಾಲೇಜಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಚಾಂಪಿಯನ್‌ಷಿಪ್ ಪ್ರಶಸ್ತಿಯನ್ನು ಪಡೆದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ “ಇನ್ಸ್ಪೈರ್ 2025” ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಟ್ರೋಫಿ, ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top