ಸಾಲು ಮರದ ತಿಮ್ಮಕ್ಕ ನಿಧನ; ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0


ಧರ್ಮಸ್ಥಳ: ಪದ್ಮಶ್ರೀ ಸಾಲುಮರದ ತಿಮ್ಮಕ್ಕ ನಿಧನರಾದ ಸುದ್ದಿ ತಿಳಿದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈ ಸುದ್ದಿ ತಿಳಿದು ವಿಷಾದವಾಯಿತು. ಗಿಡ-ಮರಗಳನ್ನು ಬೆಳೆಸುವುದರೊಂದಿಗೆ ಪರಿಸರ ಸಂರಕ್ಷಣೆ ಬಗ್ಯೆ ವಿಶೇಷ ಕಾಳಜಿವಹಿಸುತ್ತಿದ್ದ ಅವರು ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಯೆ ಅರಿವು, ಜಾಗೃತಿ ಮೂಡಿಸುತ್ತಿದ್ದರು. ಮಾಗಡಿ ತಾಲ್ಲೂಕಿನಲ್ಲಿ ರಸ್ತೆ ಬದಿ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ಅವರು ಸಾಲುಮರದ ತಿಮ್ಮಕ್ಕ ಎಂದೇ ಚಿರಪರಿಚಿತರಾದರು. ಸಸಿಗಳನ್ನು ಮಕ್ಕಳಂತೆ ಪ್ರೀತಿಯಿಂದ ಸಾಕಿ ಸಲಹಿದ್ದಾರೆ ಎಂದುರ ಸ್ಮರಿಸಿಕೊಂಡಿದ್ದಾರೆ.


ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಯೆ ಅವರು ಜಾಗೃತಿ ಮೂಡಿಸಿದ್ದಾರೆ. 2004 ರ ಆಗಸ್ಟ್ 18ರಂದು ಅವರು ಧರ್ಮಸ್ಥಳಕ್ಕೆ ಬಂದು ಪರಿಸರದ ಸಂರಕ್ಷಣೆ ಬಗ್ಯೆ ಮಾತುಕತೆ ನಡೆಸಿದ್ದರು. ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಿದ ನೆನಪು ಇನ್ನೂ ಸ್ಮರಣೀಯವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top