ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಕರ್ನಾಟಕ ಕುಮಾರ ರತ್ನ” ರಾಜ್ಯ ಪ್ರಶಸ್ತಿ

Chandrashekhara Kulamarva
0


ದಾವಣಗೆರೆ: ಬೆಂಗಳೂರಿನ ನೃತ್ಯ, ಸಂಗೀತ ಹಾಗೂ ಅಭಿನಯ ತರಬೇತಿ ಸಂಸ್ಥೆ ಸ್ಪೂರ್ತಿ ಕಲಾ ಟ್ರಸ್ಟ್‌ನಿಂದ ವಾಣಿಜ್ಯ ನಗರಿ ದಾವಣಗೆರೆಯನ್ನು ಸಾಂಸ್ಕೃತಿಕ ನಗರಿಯಾಗಿ ಪರಿವರ್ತನೆ ಮಾಡಿ ಕಳೆದ 4 ದಶಕಗಳಿಂದ ನಿರಂತರವಾಗಿ ಕಲೆ, ಸಾಹಿತ್ಯ, ಸಂಗೀತ, ಯಕ್ಷಗಾನ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಜನರಾಗಿ ಕರಾವಳಿ ಜಿಲ್ಲೆಗಳ ಅಪ್ಪಡ ಕನ್ನಡ ಭಾಷೆಯನ್ನು ವಿಶ್ವದಾದ್ಯಂತ ವೈಭವೀಕರಿಸಿದ ಗಂಡುಕಲೆ ಆರಾಧನಾ ಕಲೆಯನ್ನು ದಾವಣಗೆರೆಗೆ ಪರಿಚಯಿಸಿದ ಸಾಧನೆಗಳನ್ನು ಗುರುತಿಸಿ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು “ಕರ್ನಾಟಕ ಕುಮಾರ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸಂಸ್ಥಾಪಕ ಡಿ. ವನಜ ತಿಳಿಸಿದ್ದಾರೆ.


ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಯಕ್ಷರಂಗ ಸಂಸ್ಥೆ, ಬಿಚ್ಕತ್ತಿ ಕುಟುಂಬ, ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ ಸಿನಿಮಾಸಿರಿ, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಗಾಯಿತ್ರಿ ಪರಿವಾರ, ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸುಗಮ ಸಂಗೀತ ಪರಿಷತ್, ಸಮಾನ ಮನಸ್ಕರ ವೇದಿಕೆ, ಕಾವೇರಿ ಸಾಂಸ್ಕೃತಿಕ ವೇದಿಕೆ, ಕರಾವಳಿ ಮಿತ್ರ ಮಂಡಳಿ ಮುಂತಾದ ಸಂಘ-ಸಂಸ್ಥೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top