ಎನ್‌ಎಂಐಟಿಯಲ್ಲಿ ಸಂಜಿತ್ ಹೆಗ್ಡೆ ಕನ್ನಡ ಗೀತೆಗಳ ಗಾಯನ

Upayuktha
0


ಯಲಹಂಕ, ಬೆಂಗಳೂರು: ಇಂದು ಬೆಳಿಗ್ಗೆ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಮಾಸಾಚರಣೆ ಹಾಗೂ ಸಂಸ್ಥೆಯ ರಜತಮಹೋತ್ಸವದ ವರ್ಷಾಚರಣೆಯ ಪ್ರಯುಕ್ತ ಏರ್ಪಟ್ಟಿದ್ದ ‘ಸಂಗೀತ ಸುಧೆ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಭ್ರಮಿಸಿದರು. ಪ್ರಸಿದ್ಧ ಬಹುಭಾಷಾ ಹಿನ್ನೆಲೆ ಗಾಯಕ ಸಂಜಿತ್ ಹೆಗ್ಡೆ ಕನ್ನಡದ ಗೀತೆಗಳನ್ನು ತುಂಬಿದ ಬಯಲು ಸಭಾಂಗಣದಲ್ಲಿ ಗಾಯನದ ಮೂಲಕ ಪ್ರಸ್ತುತ ಪಡಿಸಿದರು.


ಪ್ರಾಂಶುಪಾಲ ಡಾ. ಎಚ್.ಸಿ. ನಾಗರಾಜ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ. ಹಿತಾ ಡಿ. ಶೆಟ್ಟಿ, ಶಿಕ್ಷಕ ಸಿಬ್ಬಂದಿ ಹಾಗೂ ಅಸಂಖ್ಯಾತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Advt Slider:
To Top