ದೃಷ್ಟಿರಹಿತ ಮಕ್ಕಳ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರದರ್ಶನ

Upayuktha
0


ಮಂಗಳೂರು: ನವೆಂಬರ್ 8 ಮತ್ತು 9 2025 ರಂದು ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ತಿಕ ವಸ್ತುಸಂಗ್ರಹಾಲಯದಲ್ಲಿ ನಡೆದ ಕ್ಯೂರಿಯಸ್ ಮೈಂಡ್ ಎಂಬ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರದರ್ಶನದಲ್ಲಿ ಸೇವಾ ಭಾರತಿ (ರಿ) ಮಂಗಳೂರು ಇದರ ಅಂಗ ಸಂಸ್ಥೆಯಾದ ರೋಮನ್ ಮತ್ತು ಕ್ಯಾಥರಿನ್ ಲೋಬೋ ದೃಷ್ಟಿರಹಿತ ಮಕ್ಕಳ ಶಾಲೆಯ ವಿದ್ಯಾರ್ಥಿನಿಯಾದ ರಕ್ಷಾ ಸಾಲಿಯಾನ್ ಮತ್ತು ಶಿಕ್ಷಕಿ ಶ್ರೀಮತಿ ದಿವ್ಯಾ ಭಟ್ ಅವರು ಭಾಗವಹಿಸಿದ್ದರು. ದೃಷ್ಟಿ ಸಬಲೀಕರಣ ಸಂಸ್ಥೆಯ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ದೇಶದಾದ್ಯಂತ ದೃಷ್ಟಿರಹಿತ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಮಂಗಳೂರಿನ ರೋಮನ್ ಮತ್ತು ಕ್ಯಾಥರಿನ್ ಲೋಬೋ ಶಾಲೆಯ ದೃಷ್ಟಿರಹಿತ ವಿದ್ಯಾರ್ಥಿನಿಯಾದ ರಕ್ಷಾ ಸಾಲಿಯಾನ್ ಚಂದ್ರನ ಮಾದರಿಯನ್ನಿಟ್ಟು ಹಗಲು ಬೆಳಕುಗಳು ಹೇಗೆ ಉಂಟಾಗುತ್ತವೆ ಮತ್ತು ಭಾರತದ ಪರಿಕಲ್ಪನೆಯ ಬಗ್ಗೆ ವಿವರವಾಗಿ ಬಂದಂತಹ ವೀಕ್ಷಕರಿಗೆ ವಿವರಿಸಿದುದು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Advt Slider:
To Top