ಮಹಿಳಾ ಶಿಕ್ಷಕಿಯರಿಗಾಗಿ ನಾಯಕತ್ವ ಸಾಮರ್ಥ್ಯಗಳ ಅಭಿವೃದ್ಧಿ’ ಕುರಿತು ಮೂರು ದಿನಗಳ ಎಫ್‌ಡಿಪಿ ಉದ್ಘಾಟನೆ
ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಿಬ್ಬಂದಿ ಅಭಿವೃದ್ಧಿ ಕೇಂದ್ರ (ಎಸ್.ಡಿ.ಸಿ), ಐಇಇಇ ಬೆಂಗಳೂರು ಸೆಕ್ಷನ್ ಹಾಗೂ ವುಮನ್ ಇನ್ ಎಂಜಿನಿಯರಿಂಗ್ (WIE) ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಹಾಗೂ ಕೆನರಾ ಬ್ಯಾಂಕ್, ನಿಟ್ಟೆಯ ಸಹಪ್ರಾಯೋಜಕತ್ವದಲ್ಲಿ, ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗವು 'ಶೀ ಲೀಡ್ಸ್: ಡೆವಲಪಿಂಗ್ ಲೀಡರ್‌ಶಿಪ್ ಕಾಂಪಿಟೆನ್ಸೀಸ್ ಫಾರ್ ವುಮನ್ ಅಕಾಡೆಮಿಷಿಯನ್ಸ್' ಎಂಬ ಶೀರ್ಷಿಕೆಯಡಿಯಲ್ಲಿ ನವೆಂಬರ್ 10ರಿಂದ ಮೂರು ದಿನಗಳ ಅಧ್ಯಾಪಕ ಅಭಿವೃದ್ಧಿ ಕಾರ್ಯಕ್ರಮ (FDP)ವನ್ನು ಆಯೋಜಿಸಿತು.
ಕಾರ್ಯಕ್ರಮವನ್ನು ಸಿಂಬಯೋಸಿಸ್ ತಾಂತ್ರಿಕ ಸಂಸ್ಥೆ, ಪುಣೆಯ ಸಹಪ್ರಾಧ್ಯಾಪಕಿ ಡಾ. ರಾಹೀ ವಾಲಾಂಬೆ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಅಕಾಡೆಮಿಕ್ ಕ್ಷೇತ್ರದಲ್ಲಿ ನಾಯಕತ್ವದ ಮಹತ್ವವನ್ನು ವಿವರಿಸಿ, ಮಹಿಳಾ ಅಧ್ಯಾಪಕರನ್ನು ಹೊಸತನ ಹಾಗೂ ಮಾರ್ಗದರ್ಶನವನ್ನು ಸ್ವೀಕರಿಸಲು ಪ್ರೇರೇಪಿಸಿದರು. ಗೌರವ ಅತಿಥಿಯಾಗಿ ಭಾಗವಹಿಸಿದ್ದ ಐಇಇಇ ಮಂಗಳೂರು ಉಪವಿಭಾಗದ ಚೇರ್ ಎಲೆಕ್ಟ್ ಡಾ. ವೇಣುಗೋಪಾಲ ಪಿ.ಎಸ್. ಮಾತನಾಡಿ ಈ ಉಪಕ್ರಮವನ್ನು ಮೆಚ್ಚಿ, ಸಹಕಾರ ಮತ್ತು ನಾಯಕತ್ವ ವೃದ್ಧಿಯಲ್ಲಿ ಐಇಇಇಯ ಪಾತ್ರವನ್ನು ವಿವರಿಸಿದರು.
ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಿಬ್ಬಂದಿ ಅಭಿವೃದ್ಧಿ ಕೇಂದ್ರದ ನಿರ್ದೇಶಕಿ ಸಾಧನಾ ದೇಶ್ಮುಖ ಅವರು ಉಪಸ್ಥಿತರಿದ್ದರು. ಸುಮಾರು 60 ಮಂದಿ ಈ ಅಧ್ಯಾಪಕ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಅಶ್ವಿನಿ ಬಿ ಸ್ವಾಗತಿಸಿ, ಎಫ್‌ಡಿಪಿಯ ಉದ್ದೇಶಗಳನ್ನು ವಿವರಿಸಿದರು. ವಿಭಾಗದ ಪ್ರಾಧ್ಯಾಪಕಿ ಡಾ. ಮಂಜುಳಾ ಗುರುರಾಜ್ ರಾವ್ ಅವರು ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ರಶ್ಮಿ ನವೀನ್ ಅವರು ಗೌರವ ಅತಿಥಿಯನ್ನು ಪರಿಚಯಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಚಿನ್ಮಯಿ ಶೆಟ್ಟಿ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ದೀಪಾ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


