ಉಳ್ಳಾಲ: ಬಾಲ್ಯದ ಶಾಲಾ ಜೀವನದಲ್ಲಿಯೇ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಅತ್ಯುನ್ನತ “ಸಿಲ್ವರ್ ಎಲಿಫೆಂಟ್” ಪ್ರಶಸ್ತಿಗೆ ಭಾಜನರಾಗಿದ್ದಾರೆ.ತಾನು ಈ ಮಟ್ಟಕ್ಕೆ ಬೆಳೆದು ನಿಲ್ಲಲು ತನ್ನ ಜೀವನದಲ್ಲಿ ಸೇವಾ ಮನೋಭಾವ,ಶಿಸ್ತು ಹಾಗೂ ತಾಳ್ಮೆ ಗಳಿಸಲು ಕಾರಣವಾಗಿದ್ದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಿಂದ ಎಂಬುದನ್ನು ಹಲವಾರು ಬಾರಿ ಯು.ಟಿ.ಖಾದರ್ ಹೇಳಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.ಇದೇ ತಿಂಗಳ 26 ರಂದು ಲಕ್ನೋದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ರವರ ದಿವ್ಯ ಹಸ್ತದಿಂದ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಿಲ್ವರ್ ಎಲಿಫೆಂಟ್ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಹಾಗೂ ಮಲೇಶಿಯಾದ ಮೇಜರ್ ಜನರಲ್ ಡಾಟೋ ಟೋಹ್ ಚೂನ್ ಸಿಯಾಂಗ್ ರವರು ಕೂಡಾ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ






