ಪುತ್ತೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಸನ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ.
ಪ್ರಥಮ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ 4X400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ, ದ್ವಿತೀಯ ವಿಜ್ಞಾನ ವಿಭಾಗದ ಸಮೃದ್ಧಿ ಜೆ ಶೆಟ್ಟಿ 100 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಪಡೆದು, ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯ (SGFI) ವತಿಯಿಂದ ಹರಿಯಾಣದ ಭೀವಾನಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಸಚಿತ್ ಪಿ ಕೆ 400 ಮೀಟರ್ ಹರ್ಡಲ್ಸ್ ನಲ್ಲಿ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಯಶ್ವಿತ್ ಹೈಜಂಪ್ ನಲ್ಲಿ ಕಂಚಿನ ಪದಕ ಗಳಿಸಿರುತ್ತಾರೆ.
ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




