ಮಂಗಳೂರು: ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶದ ವತಿಯಿಂದ 'ಸಮತೋಲನ ಜೀವನಕ್ಕಾಗಿ ಶಾಶ್ವತ ಪೌಷ್ಟಿಕತೆ' ಕುರಿತು ಸಿಬ್ಬಂದಿ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಇಲ್ಲಿನ ಪೌಷ್ಟಿಕ ತಜ್ಞೆ ಕೆ.ಎಸ್ ಚೈತ್ರ ಕಾಮತ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದು, ನಮ್ಮ ದೈನಂದಿನ ಜೀವನದಲ್ಲಿ ಆಹಾರ ಕ್ರಮದ ಬಗ್ಗೆ ಸಲಹೆ ನೀಡಿದರು.
ಅಲ್ಲದೆ ಸಕ್ಕರೆ ಕಾಯಿಲೆ ಮತ್ತು ಬೊಜ್ಜು ಇವುಗಳಿಂದ ಬಳಲುವವರು ಸೇವಿಸುವ ಆಹಾರ ಬಗ್ಗೆ ತಿಳಿಸಿ, ಸಂವಾದ ನಡೆಸಿಕೊಟ್ಟರು. ಕಾಲೇಜು ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ. ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಸಂಯೋಜಕಿ ಅನಸೂಯ ಭಾಗವತ್ ಸ್ವಾಗತಿಸಿ, ಮೇಘ ರಾವ್ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ






